ಬೆಳಗಾವಿ ಮಹಾನಗರ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಲೆಮಾರಿ ಕುಟುಂಬಗಳನ್ನು ಸಂಪರ್ಕಿಸಿ ಇಎಫ್ ಅರ್ಜಿಗಳನ್ನು ಬಿಎಲ್‌ಒಗಳು ಭರ್ತಿ ಮಾಡಿಸಿಕೊಳ್ಳುತ್ತಿದ್ದಾರೆ. ಉದ್ಯೋಗ ಹುಡುಕಿಕೊಂಡು ಮಹಾರಾಷ್ಟ್ರ, ಗೋವಾ, ಬೆಂಗಳೂರು ಸೇರಿ ವಿವಿಧ ಭಾಗಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಸಂಪರ್ಕಿಸಿ ಇಎಫ್ ಅರ್ಜಿಗಳನ್ನು ನೀಡಲಾಗುತ್ತಿದೆ. ಬೇರೆ ರಾಜ್ಯಗಳಲ್ಲಿರುವ ವಾಹನ ಚಾಲಕರು, ವಿದ್ಯಾರ್ಥಿಗಳು, ಐಟಿ ಬಿಟಿ ಕಂಪನಿಯ ನೌಕರರುನ್ನು ಸಂಪರ್ಕಿಸುವ ಕೆಲಸ ಮಾಡಲಾಗುತ್ತಿದೆ ಎಂದು ಡಿಸಿ ಮೊಹಮ್ಮದ ರೋಷನ್ ಸ್ಪಷ್ಟಪಡಿಸಿದರು.