ರಾಯಬಾಗ: ಕಕ್ಷಿದಾರರು ರಾಜಿ ಸಂಧಾನ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಪಟ್ಟಣದ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮಾತನಾಡಿ, ಒಟ್ಟು 2,484 ವಿವಿಧ ಪ್ರಕರಣ ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ. ಬೇರೆಯಾಗಿದ್ದ ಜೋಡಿ ಒಂದು ಮಾಡಲಾಗಿದೆ ಎಂದರು.