ದ್ವಿತೀಯ ಪಿಯು ಪರೀಕ್ಷೆ ಸಿದ್ಧತೆ ಪೂರ್ಣ

puc exam
puc exam
Published on
ಬೆಳಗಾವಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ 120ಕ್ಕೂ ಅಧಿಕ ಸಿಸಿ ಟಿವಿ ಅಳವಡಿಸಲಾಗಿದೆ.
ಫೆ.28ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 10ರವರೆಗೆ ನಡೆಯಲಿವೆ. ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 51,938 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 95 ಪರೀಕ್ಷಾ ಕೇಂದ್ರಗಳಿದ್ದು, ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಪ್ರತಿ ಮಾರ್ಗಕ್ಕೆ ಒಬ್ಬರಂತೆ 27 ಮಾರ್ಗಾಧಿಕಾರಿಗಳ ನಿಯೋಜನೆ ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರು, ಉಪ ಮುಖ್ಯಅಧೀಕ್ಷಕರು ಹಾಗೂ ಸ್ಥಾನಿಕ ಜಾಗೃತ ದಳದ ಸಿಬ್ಬಂದಿಯನ್ನು ನೇಮಿಸಲಾಗಿದೆ. ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿಗಾವಹಿಸಲು ಹೆಸ್ಕಾಂಗೆ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಸಮಸ್ಯೆಯಾಗದಂತೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಊಹಾಪೋಹಗಳ ಬಗ್ಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಚೆನ್ನಾಗಿ ಬರೆಯುವತ್ತ ಗಮನಹರಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಎಂ.ಎಂ.ಕಾಂಬಳೆ ತಿಳಿಸಿದ್ದಾರೆ.
"

ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಈ ಬಾರಿಯೂ ವೆಬ್‌ಕಾಸ್ಟಿಂಗ್ ಸೌಲಭ್ಯ ಇರಲಿದೆ. ಬೆಳಗಾವಿ ಜಿಪಂ ಕಚೇರಿ, ಚಿಕ್ಕೋಡಿ ಎಸಿ ಕಚೇರಿಯಲ್ಲಿ ಅಧಿಕಾರಿಗಳು ನೇರ ಪ್ರಸಾರ ವೀಕ್ಷಿಸಲಿದ್ದಾರೆ. ಈ ಮೂಲಕ ಪರೀಕ್ಷಾ ಅಕ್ರಮ ತಡೆಗಟ್ಟಿ ಪಾರದರ್ಶಕ ಪರೀಕ್ಷೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಯಾವುದೇ ಗೊಂದಲ ಉದ್ಭವಿಸಿದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net