

ಬೆಳಗಾವಿ:
ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ನಾಗರಿಕ ಪ್ರದೇಶಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ವಸತಿ ಪ್ರದೇಶ, ಮಾರುಕಟ್ಟೆ, ರಸ್ತೆಗಳು, ಬಂಗಲೆಗಳು ಸೇರಿದಂತೆ ಒಟ್ಟು 756 ಎಕರೆ ಪ್ರದೇಶವನ್ನು ಪಾಲಿಕೆಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು.