

ಪದ್ಮಶ್ರೀ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರ 79ನೇ ಜನ್ಮದಿನವು ಅಂಕಲಿ ಗ್ರಾಮದಲ್ಲಿ ಶನಿವಾರ ಅಭೂತಪೂರ್ವ ಸಂಭ್ರಮ ಮತ್ತು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಈ ವಿಶೇಷ ದಿನದ ಅಂಗವಾಗಿ ಆಯೋಜಿಸಲಾಗಿದ್ದ ವೈವಿಧ್ಯಮಯ ಕಾರ್ಯಕ್ರಮಗಳು ಡಾ.ಕೋರೆ ಅವರ ಮೇಲಿರುವ ಅಪಾರ ಅಭಿಮಾನವನ್ನು ಎತ್ತಿ ತೋರಿಸಿದವು.
ನನ್ನ ಜನ್ಮದಿನ ನೆಪ ಮಾತ್ರ. ಈ ಭಾಗದಲ್ಲಿ ಸಮಾಜಮುಖಿ ಹಾಗೂ ಜನಪರ ಕಾರ್ಯಕ್ರಮಗಳಿಗೆ ಉತ್ತೇಜನ ನೀಡುವುದೇ ಈ ದಿನದ ಉದ್ದೇಶ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆ ಕುಸ್ತಿ ಮೇಲಿನ ಆಸಕ್ತಿ ಕಡಿಮೆಯಾಗುತ್ತಿರುವುದು ಆತಂಕದ ಸಂಗತಿ. ಹೀಗಾಗಿ, ಯುವ ಪೈಲ್ವಾನರಿಗೆ ಚೈತನ್ಯ ತುಂಬುವ ಹಾಗೂ ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದ ವಿವಿಧ ಭಾಗಗಳ ಪೈಲ್ವಾನರನ್ನು ಆಹ್ವಾನಿಸಿ, ರಾಷ್ಟ್ರಮಟ್ಟದ ಜಂಗೀ ನಿಕಾಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ, ರಕ್ತದಾನ, ಆರೋಗ್ಯ ತಪಾಸಣೆ, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
— ಡಾ.ಪ್ರಭಾಕರ ಕೋರೆ ಕಾಹೆರ ಕುಲಾಧಿಪತಿ