ನರ್ಸಿಂಗ್‌ನಲ್ಲಿವೆ ವಿಪುಲ ಅವಕಾಶ

ಚಿಕ್ಕೋಡಿಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಶುಶ್ರೂಷ ಮಹಾವಿದ್ಯಾಲಯದ ವಾರ್ಷಿಕೋತ್ಸವವನ್ನು ಡಾ.ವೀರೇಶಕುಮಾರ ನಂದಗಾಂವ ಉದ್ಘಾಟಿಸಿದರು. ಡಾ.ಕಿರಣಕುಮಾರ ಮುತ್ನಾಳಿ, ಡಾ.ಎಂ.ಬಿ.ತಡಲಗಿ ಇತರರಿದ್ದರು.
ಚಿಕ್ಕೋಡಿಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಶುಶ್ರೂಷ ಮಹಾವಿದ್ಯಾಲಯದ ವಾರ್ಷಿಕೋತ್ಸವವನ್ನು ಡಾ.ವೀರೇಶಕುಮಾರ ನಂದಗಾಂವ ಉದ್ಘಾಟಿಸಿದರು. ಡಾ.ಕಿರಣಕುಮಾರ ಮುತ್ನಾಳಿ, ಡಾ.ಎಂ.ಬಿ.ತಡಲಗಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ವೀರೇಶಕುಮಾರ ನಂದಗಾಂವ ಅಭಿಪ್ರಾಯ
  • ಕಾಲೇಜು ವಾರ್ಷಿಕೋತ್ಸವ
ಚಿಕ್ಕೋಡಿ: ವೈದ್ಯಕೀಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಕೆ ಸಾಕಷ್ಟು ಬೇಡಿಕೆ ಇದ್ದು, ವಿದ್ಯಾರ್ಥಿಗಳು ಉತ್ತಮ ಸಂವಹನ, ಬಹು ಕೌಶಲ ಹೊಂದುವುದು ಅಗತ್ಯವಾಗಿದೆ ಎಂದು ಬೆಳಗಾವಿ ಕಾಹೆರ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಪ್ರಾಂಶುಪಾಲ ಡಾ.ವೀರೇಶಕುಮಾರ ನಂದಗಾಂವ ಹೇಳಿದರು.
ಕೆಎಲ್‌ಇ ಸಂಸ್ಥೆ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಶುಶ್ರೂಷ ವಿಜ್ಞಾನ ಮಹಾವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಶುಶ್ರೂಷ ವಿದ್ಯಾರ್ಥಿಗಳು ವೃತ್ತಿ ಜೀವನದ ಯಶಸ್ಸಿಗಾಗಿ ಸಮಯ ವ್ಯರ್ಥ ಮಾಡದೇ ನಿರಂತರ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಶಿಸ್ತು, ಸಮಯ ಪ್ರಜ್ಞೆ, ಉತ್ತಮ ಸಂವಹನ ನರ್ಸಿಂಗ್ ವೃತ್ತಿಯ ಪ್ರಮುಖ ಲಕ್ಷಣಗಳಾಗಿವೆ ಎಂದರು.
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಸದಸ್ಯ ಡಾ.ಎಂ.ಬಿ.ತಡಲಗಿ ಮಾತನಾಡಿ, ಬಹು ಬೇಡಿಕೆ ಇರುವ ನರ್ಸಿಂಗ್ ಕೋರ್ಸ್ನಲ್ಲಿ ವಿಪುಲ ಅವಕಾಶಗಳಿವೆ. ಅವುಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಕಿರಣಕುಮಾರ ಮುತ್ನಾಳಿ ಮಾತನಾಡಿ, ವಿದ್ಯಾರ್ಥಿಗಳು ಗುರಿ ಸಾಧನೆಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಡಾ.ಸುನೀಲ ಎಂ.ಬಿ. ಮಾತನಾಡಿ, ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿ ಗುರಿ ಸಾಧನೆಗೆ ಮುಂದಾಗಬೇಕು ಎಂದರು.
ಡಾ.ಎಂ.ಬಿ.ತಡಲಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net