ನಕಲಿ ದಾಖಲೆ ಸೃಷ್ಟಿಕೃತರ ವಿರುದ್ಧ ಕ್ರಮ

 ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. ಆಸೀಫ್ ಸೇಠ್, ಮೊಹಮ್ಮದ್ ರೋಷನ್,ರಾಹುಲ ಶಿಂಧೆ, ಭೊರಸೆ ಭೂಸನ್ ಇತರರಿದ್ದರು.
ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. ಆಸೀಫ್ ಸೇಠ್, ಮೊಹಮ್ಮದ್ ರೋಷನ್,ರಾಹುಲ ಶಿಂಧೆ, ಭೊರಸೆ ಭೂಸನ್ ಇತರರಿದ್ದರು.
Published on
ಬೆಳಗಾವಿ: ಮಹಾನಗರ ಸೇರಿ ಜಿಲ್ಲೆಯ್ಯದ್ಯಂತ ನಕಲಿ ಆಧಾರ್ ಗುರುತಿನ ಚೀಟಿ ಸೇರಿ ವಿವಿಧ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಆಸ್ತಿ ಮಾರಾಟ ಪ್ರಕರಣಗಳು ಗಮನಕ್ಕೆ ಬಂದಿದೆ. ಈ ಕುರಿತು ತನಿಖೆ ನಡೆಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನಂತರ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ನಕಲಿ ಆಧಾರ್ ಗುರುತಿನ ಚೀಟಿ ಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿವೆ. ಆಸ್ತಿ ಮಾಲೀಕರಂತೆ ನಕಲಿ ಮಾಡುವುದರಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಪಡೆ ರಚಿಸಲಾಗುವುದು. ಆಧಾರ್ ನವೀಕರಣ ಸೇವೆ ಒದಗಿಸುವ ಖಾಸಗಿ ಕೇಂದ್ರ ಮೇಲೆ ನಿಗಾ ವಹಿಸಲಾಗುವುದು ಎಂದರು.
ನಗರ, ಗ್ರಾಮೀಣ ಭಾಗದಲ್ಲಿರುವ ಆಧಾರ್ ನವೀಕರಣ ಸೇವೆ ಒದಗಿಸುವ ಖಾಸಗಿ ಕೇಂದ್ರಗಳ ಮೇಲೂ ನಿಗಾ ಇಡಲಾಗುವುದು. ಅವಶ್ಯಬಿದ್ದರೆ ದಾಳಿ ನಡೆಸಿ ಪರಿಶೀಲನೆ ನಡೆಸಲಿದ್ದಾರೆ.ಆಸ್ತಿಗಳ ನೋಂದಣಿ ಯಾವುದೇ ಸ್ಥಳದಲ್ಲಿ ಮಾಡಲು ಅವಕಾಶ ಕಲ್ಪಿಸಿದ್ದರಿಂದ ದುರಪಯೋಗ ಹೆಚ್ಚಾಗುತ್ತಿದೆ. ವಂಚನೆಗೆ ಒಳಗಾದವರು ಸಹ ದೂರುಗಳನ್ನು ಸಲ್ಲಿಸಬೇಕು. ಆಗ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಈಗಾಗಲೇ ರಾಜ್ಯದಲ್ಲಿ ಒಟ್ಟು 48 ರಾಷ್ಟ್ರೀಯ ಹೆದ್ದಾರಿ ಯೋಜನೆ ಒಂದು ದಶಕಕ್ಕೂ ಹೆಚ್ಚು ಕಾಲ ಬಾಕಿ ಉಳಿದಿದ್ದವು. 32 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವವನ್ನು 2017ರಲ್ಲಿ ಎನ್‌ಎಚ್‌ಎಐಗೆ ಕಳುಹಿಸಲಾಗಿದೆ. ಅದು ಅವರ ಬಳಿ ಬಾಕಿ ಉಳಿದಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ಬಳಿಕ 41 ಯೋಜನೆ ತೆರವುಗೊಳಿಸಿದ್ದು, ಕೆಲಸಗಳು ಪ್ರಗತಿಯಲ್ಲಿವೆ. ಕೆಲವು ಅಡೆತಡೆಗಳಿಂದಾಗಿ ಏಳು ಕಾಮಗಾರಿ ಬಾಕಿ ಉಳಿದಿದ್ದು, ಶೀಘ್ರ ಪರಿಹರಿಸಲಾಗುವುದು. 30 ಹೊಸ ಯೋಜನೆಗಳಿಗೆ ಅನುದಾನ ಬಿಡುಗಡೆ ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
.................
ಬಾಕ್ಸ್
ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಿಂದ 400 ಕೋಟಿ ರೂ. ಲೂಟಿ ಮಾಡಲಾಗಿದೆ ಎಂಬ ದೂರು ಅಸ್ಪಷ್ಟವಾಗಿದೆ. ಯಾವುದೇ ನಿರ್ದಿಷ್ಟ ಸ್ಥಳವನ್ನು ಉಲ್ಲೇಖಿಸದ ಕಾರಣ ವದಂತಿಯಾಗಿದೆ ವಿನಃ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಘಾತ್ ವಿಭಾಗವು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ವ್ಯಾಪ್ತಿಯಲ್ಲಿ ಹರಡಿದೆ. ಮಹಾರಾಷ್ಟ್ರ ಪೊಲೀಸರು ನಿಖಿರವಾಗಿ ಮಾಹಿತಿ ನೀಡಿದರೆ ಬೆಳಗಾವಿ ಪೊಲೀಸರು ತನಿಖೆ ನಡೆಸಲು ಸಹಕಾರಿಯಾಗಲಿದೆ. ಈ ಸಂಬಂಧ ಯಾರು ಅಧಿಕೃತವಾಗಿ ದೂರು ನೀಡಿದಿರುವ ಕಾರಣ ತನಿಖೆ ನಡೆಸುವುದು ಕಷ್ಟವಾಗಿದೆ. ಈ ಹಣ ಕಾಂಗ್ರೆಸ್‌ನವರದು ಎಂಬ ಮಹಾರಾಷ್ಟ್ರ ಸಿಎಂ ಹೇಳಿಕೆ ಸತ್ಯಕ್ಕೆ ದೂರವಾದದ್ದು. ತನಿಖೆ ನಡೆಸಿದರೆ ಮಾತ್ರ ಸತ್ಯಾಂಶ ಗೊತ್ತಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
......
ಬಾಕ್ಸ್
ಜಿಲ್ಲೆಗೆ ಸಿದ್ದರಾಮಯ್ಯ ಆಗಮನ
ಬೆಳಗಾವಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಜಿಲ್ಲಾ ಕ್ರೀಡಾಂಗಣ, ಮೇಲ್ಸೆತುವೆ ನಿರ್ಮಾಣ, ಪತ್ರಿಕಾ ಭವನ, ಸವದತ್ತಿ ಯಲ್ಲಮ್ಮ ಅಭಿವೃದ್ಧಿ, ಬಿಮ್ಸ್ ಆವರಣದಲ್ಲಿ ಕಿದ್ವಾಯಿ ಆಸ್ಪತ್ರೆ ನಿರ್ಮಾಣ ಸೇರಿ ಜಿಲ್ಲೆಯ ವಿವಿಧ ಭಾಗಗದಲ್ಲಿ ರಸ್ತೆ ಸೇತುವೆ ನಿರ್ಮಾಣ ಸೇರಿ ಅಂದಾಜು 500 ಕೋಟಿ ರೂ. ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಆಗಮಿಸಲಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
...............
ಕೋಟ್ಸ್
ಬೆಳಗಾವಿ ಕೋಟೆ ಕೆರೆ ಬದಲಾಗಿ ಸುವರ್ಣ ವಿಧಾನಸೌಧದ ಆವರಣದಲ್ಲಿಯೇ ಬುದ್ಧನ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಿ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು.
- ಸತೀಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ
............
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net