ತಪ್ಪು ಮಾಡಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ

ಕೆ.ರಾಮರಾಜನ್
ಕೆ.ರಾಮರಾಜನ್
Published on
ಬೆಳಗಾವಿ : ಒಂದಿಬ್ಬರು ಮಾಡುವ ತಪ್ಪಿನಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ತಡೆಗಟ್ಟುವ ಕಾರ್ಯವಾಗಬೇಕಿದ್ದು, ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯ ಮಾಸಿಕ ಪಥಸಂಚಲನ ಪರಿವೀಕ್ಷಿಸಿ ಮಾತನಾಡಿದ ಅವರು, ಖಾಕಿ ಬಟ್ಟೆಗೆ ತನ್ನದೇ ಆದ ಗೌರವವಿದೆ. ಕಿವಿ ಮತ್ತು ಕಣ್ಣು ಸಕ್ರಿಯವಾಗಬೇಕೆ ಹೊರತು ಕಿವುಡರು ಕುರುಡರಂತೆ ವರ್ತಿಸಬಾರದು. ಅಕ್ರಮಗಳ ವಿರುದ್ದ ಕ್ರಮ ಕೈಗೊಳ್ಳಲೇಬೇಕು. ಕೆಲಸ ಮಾಡದ ಸಿಬ್ಬಂದಿಗಳನ್ನು ಬದಲಾಯಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ನಡೆಯುವ ದೊಡ್ಡ ಜಾತ್ರೆಗಳಲ್ಲಿ ಸೂಕ್ತ ಮಾರ್ಗದರ್ಶನದಲ್ಲಿ ಬಂದೋಬಸ್ತ್ ಮಾಡಬೇಕು. ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಜಾತ್ರೆಗಳು ಶಾಂತಿ ಸುವ್ಯವಸ್ಥೆಯಿಂದ ನಡೆಸುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net