ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ

ಹುಕ್ಕೇರಿ ತಾಲೂಕಿನ ಅರ್ಜುನವಾಡದಲ್ಲಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ತಪಾಸಣೆ ಶಿಬಿರದಲ್ಲಿ ಡಾ.ಅಮೃತಾ, ಜಬಿರ್, ಶಾಹೀನ್ ಹೊಂಬಳ ಇತರರು ಇದ್ದರು.
ಹುಕ್ಕೇರಿ ತಾಲೂಕಿನ ಅರ್ಜುನವಾಡದಲ್ಲಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ತಪಾಸಣೆ ಶಿಬಿರದಲ್ಲಿ ಡಾ.ಅಮೃತಾ, ಜಬಿರ್, ಶಾಹೀನ್ ಹೊಂಬಳ ಇತರರು ಇದ್ದರು.
Published on
ಬೆಳಗಾವಿ: ಆಹಾರ ಪದಾರ್ಥಗಳಿಗೆ ರಾಸಾಯನಿಕ ಬಳಸುತ್ತಿರುವುದರಿಂದ ಹಲವು ರೋಗ ಬರುತ್ತಿವೆ. ಮುಖ್ಯವಾಗಿ ಕ್ಯಾನ್ಸರ್‌ನಂತಹ ಮಾರಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದನ್ನು ತಡೆಯಲು ಉತ್ತಮ ಆಹಾರ ಪದ್ಧತಿ ಹಾಗೂ ಕ್ರಮಬದ್ಧ ಆರೋಗ್ಯ ತಪಾಸಣೆ ರೂಢಿಸಿಕೊಳ್ಳುವುದು ಮುಖ್ಯ ಎಂದು ಕೆಎಲ್‌ಇ ಸಂಸ್ಥೆಯ ಡಾ.ಸಂಪತಕುಮಾರ ಎಸ್.ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ವೈದ್ಯೆ ಡಾ.ಅಮೃತಾ ಹೇಳಿದರು.
ಹುಕ್ಕೇರಿ ತಾಲೂಕಿನ ಅರ್ಜುನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿಂಡಾಲ್ಕೊ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯು ಕೆಎಲ್‌ಇ ಸಂಸ್ಥೆಯ ಡಾ.ಸಂಪತಕುಮಾರ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಸಹಯೋಗದಲ್ಲಿ ಈಚೆಗೆ ಏರ್ಪಡಿಸಿದ್ದ ಆರೋಗ್ಯ ಹಾಗೂ ಕ್ಯಾನ್ಸರ್ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.
ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಜಬಿರ್, ಮಹಿಳಾ ಕಲ್ಯಾಣ ಸಂಸ್ಥೆಯ ಶಾಹೀನ್ ಹೊಂಬಳ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿದ್ದರು. ಕೆಎಲ್‌ಇ ತಜ್ಞ ವೈದ್ಯರು ಬಾಯಿ, ಸ್ತನ ಹಾಗೂ ಗರ್ಭಕಂಠ ತಪಾಸಣೆ ಕೈಗೊಂಡರು. 123 ಜನ ಶಿಬಿರದ ಸದುಪಯೋಗ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net