ನಗರದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಪೀಳಿಗೆ ದೇಶಭಕ್ತಿ, ಶಿಸ್ತು ಮತ್ತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಶಿವಾಜಿ ಮಹಾರಾಜರು ದೇಶರಕ್ಷಣೆಗೆ ಮಾಡಿದ ತ್ಯಾಗ ಎಲ್ಲರಿಗೂ ಮಾದರಿ ಎಂದು ಹೇಳಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ, ಪೌರಾಯುಕ್ತ ಸಂಗನಬಸಯ್ಯ ಗದ್ದಗಿಮಠ, ಪಿಐ ಸುರೇಶ ಬೆಂಡೆಗುಂಬಳ, ಮಂಜುನಾಥ ಪಾಚಂಗಿ, ತಾನಾಜಿ ಮುರಂಕರ, ಸಮುದಾಯದ ಮುಖಂಡರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಜೀವನ ಚರಿತ್ರೆ ಮತ್ತು ಸಾಧನೆ ಸ್ಮರಿಸಲಾಯಿತು.