ಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭವಾಗಿದೆ.
ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಟ್ರೇಡ್ಸ್‌ಮನ್ 10ನೇ ತರಗತಿ ಪಾಸ್, ಅಗ್ನಿವೀರ ಟ್ರೇಡ್ಸ್‌ಮನ್ 8ನೇ ತರಗತಿ ಪಾಸ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ಹುದ್ದೆಗಳ ದಾಖಲಾತಿಗೆ ನೋಂದಣಿ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ.
ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.