ಕೃಷಿ ಉತ್ಸವ ರೈತರಿಗೆ ವೇದಿಕೆ

ನಿಪ್ಪಾಣಿಯ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಜೊಲ್ಲೆ ಗ್ರೂಪ್ ವತಿಯಿಂದ ಹಮ್ಮಿಕೊಂಡಿದ್ದ ಕೃಷಿ ಉತ್ಸವಕ್ಕೆ ಗಣ್ಯರು ಚಾಲನೆ ನೀಡಿದರು. ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ನಿಜಲಿಂಗೇಶ್ವರ ಸ್ವಾಮೀಜಿ, ಡಾ.ಶ್ರದ್ಧಾನಂದ ಸ್ವಾಮೀಜಿ, ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಅಣ್ಣಾಸಾಹೇಬ ಜೊಲ್ಲೆ, ಶಶಿಕಲಾ ಜೊಲ್ಲೆ ಇತರರಿದ್ದರು.
ನಿಪ್ಪಾಣಿಯ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಜೊಲ್ಲೆ ಗ್ರೂಪ್ ವತಿಯಿಂದ ಹಮ್ಮಿಕೊಂಡಿದ್ದ ಕೃಷಿ ಉತ್ಸವಕ್ಕೆ ಗಣ್ಯರು ಚಾಲನೆ ನೀಡಿದರು. ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ನಿಜಲಿಂಗೇಶ್ವರ ಸ್ವಾಮೀಜಿ, ಡಾ.ಶ್ರದ್ಧಾನಂದ ಸ್ವಾಮೀಜಿ, ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಅಣ್ಣಾಸಾಹೇಬ ಜೊಲ್ಲೆ, ಶಶಿಕಲಾ ಜೊಲ್ಲೆ ಇತರರಿದ್ದರು.
Published on
ನಿಪ್ಪಾಣಿ: ಜಾನುವಾರುಗಳು ರೈತರ ಜೀವಾಳ. ರೈತರ ಕಲೆ, ಕ್ರೀಡೆಗಳನ್ನು ಜೀವಂತವಾಗಿಡಲು ಕೃಷಿ ಉತ್ಸವ ಉತ್ತಮ ವೇದಿಕೆ ಎಂದು ಕನ್ಹೇರಿ ಸಿದ್ಧಗಿರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ನಗರದ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆ ಮತ್ತು ಜೊಲ್ಲೆ ಗ್ರೂಪ್ ವತಿಯಿಂದ ಹಮ್ಮಿಕೊಂಡಿರುವ ಕೃಷಿ ಉತ್ಸವಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಮೇಳ ರೈತರ ಉತ್ಸವವಾಗಿದು,
ಜಾನುವಾರುಗಳನ್ನು ಸಂರಕ್ಷಿಸುವ ಕಾರ್ಯವಾಗಬೇಕು. 21ನೇ ಶತಮಾನದಲ್ಲಿ ಎತ್ತುಗಳನ್ನು ಸಾಕುವುದು ಎಂದರೆ ಸಂಸ್ಕೃತಿ ಉಳಿಸುವ ಪ್ರಯತ್ನವಾಗಿದೆ. ಎತ್ತಿನ ಸ್ಪರ್ಧೆ ರೈತರಿಗೆ ಉತ್ತಮ ವೇದಿಕೆಯಾಗಿದೆ ಎಂದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ರೈತರು ದೇಶದ ಆಧಾರಸ್ತಂಭ. ಹೀಗಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ರೈತರಿಗಾಗಿ ಉತ್ತಮ ಯೋಜನೆಗಳನ್ನು ನೀಡಿದ್ದಾರೆ ಎಂದರು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ನಿಡಸೋಸಿ ನಿಜಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಕಾರ್ಖಾನೆ ಆವರಣದಲ್ಲಿ ವಿವಿಧ ತಳಿಗಳ ಜಾನುವಾರು ಪ್ರದರ್ಶನ ಮತ್ತು ವಾಣಿಜ್ಯ ಕೃಷಿ ಉಳುಮೆ ಸಂಬಂಧಿತ ವಾಹನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಸದಲಗಾದ ಡಾ.ಶ್ರದ್ಧಾನಂದ ಸ್ವಾಮೀಜಿ, ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ, ಹಾಲಸಿದ್ಧನಾಥ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ, ಸಂಚಾಲಕ ಜಯಕುಮಾರ ಖೋತ, ಜಯವಂತ ಭಾಟಲೆ, ರಾಜು ಗುಂದೇಶಾ, ಸುಮಿತ ಸಾಸನೆ, ಸುನೀಲ ಪಾಟೀಲ, ರಾವಸಾಹೇಬ ರಾಳೆ, ರಮೇಶ ಪಾಟೀಲ, ಸುಹಾಸ ಗೂಗೆ,
ಪ್ರವೀಣ ಶಿಂಧೆ, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ ಶಿರಗಾಂವೆ, ಕಚೇರಿ ಅಧೀಕ್ಷಕ ಗಜನನ ರಾಮನಕಟ್ಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net