ಯಕ್ಕಂಚಿ ಗ್ರಾಮದ ಕೋಕಳೆ ತೋಟದ ವಸತಿ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಚಿದಾನಂದ ಸವದಿ ಅವರನ್ನು ಸನ್ಮಾನಿಸಿದರು. ಬಸಯ್ಯ ಪೂಜಾರಿ, ಶಂಕರ ರಾಮತೀರ್ಥ, ತುಕಾರಾಮ ಗೊಂದಳೆ, ಬಸಪ್ಪ ಹೊಕ್ಕುಂಡಿ ಇತರರಿದ್ದರು.
ಅಥಣಿ ಗ್ರಾಮೀಣ: ಕ್ಷೇತ್ರದಲ್ಲಿ ಬಡ ಮಕ್ಕಳ ಶಿಕ್ಷಣ, ಪಾಲನೆ, ಆರೈಕೆ, ಸೇವೆ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಯುವಮುಖಂಡ ಚಿದಾನಂದ ಸವದಿ ಹೇಳಿದರು.
ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಕೋಕಳೆ ತೋಟದ ವಸತಿ ಪ್ರದೇಶದಲ್ಲಿ ೨೦ ಲಕ್ಷ ರೂ. ಮೊತ್ತದಲ್ಲಿ ಅಂಗನವಾಡಿ ಕೇಂದ್ರ ೨೯ರ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಂಗನವಾಡಿ ಕಟ್ಟಡ ನಿರ್ಮಾಣ ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿತ್ತು. ತಾಲೂಕಿನಲ್ಲಿ ಕಟ್ಟಡ ಇಲ್ಲದಿರುವ ಅಂಗನವಾಡಿ ಪರಿಶೀಲಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು. ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಸೇರಿ ಮೂಲಸೌಕರ್ಯ ಒದಗಿಸಲು ಅನುದಾನ ಬಿಡುಗಡೆಗೊಳಿಸುವಂತೆ ಶಾಸಕ ಲಕ್ಷ್ಮಣ ಸವದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಸ್ತಾವ ಸಲ್ಲಿಸಿದ್ದಾರೆ ಎಂದು ತಿಳಿಸಿದರು.