ಬೆಳಗಾವಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ವಿಜ್ಞಾನ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಕ ಹಾಗೂ ಗಣಿತ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಆಪ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 16ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.