ಆರ್‌ಸಿಯು ಕೀರ್ತಿ ಹೆಚ್ಚಿಸಿದ ಕ್ರೀಡಾಪಟುಗಳು

 ಬೆಳಗಾವಿ ರಾಣಿ ಚನ್ನಮ್ಮ ವಿವಿಧ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು  ಪ್ರೊ.ಸಿ.ಎಂ.ತ್ಯಾಗರಾಜ್ ಉದ್ಘಾಟಿಸಿದರು. ಸಂತೋಷ ಕಾಮಗೌಡ, ಡಾ.ಜಗದೀಶ ಗಸ್ತಿ ಇತರರಿದ್ದರು.
ಬೆಳಗಾವಿ ರಾಣಿ ಚನ್ನಮ್ಮ ವಿವಿಧ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಪ್ರೊ.ಸಿ.ಎಂ.ತ್ಯಾಗರಾಜ್ ಉದ್ಘಾಟಿಸಿದರು. ಸಂತೋಷ ಕಾಮಗೌಡ, ಡಾ.ಜಗದೀಶ ಗಸ್ತಿ ಇತರರಿದ್ದರು.
Published on

ಬೆಳಗಾವಿ:

ಮೈದಾನದಲ್ಲಿ ಬೆವರು ಹರಿಸಿ, ಪರಿಶ್ರಮ ಹಾಗೂ ಶಿಸ್ತಿನಿಂದ ಸಾಧನೆಯ ಶಿಖರ ಏರುತ್ತಿರುವ ಕ್ರೀಡಾಪಟುಗಳ ಬೆನ್ನುತಟ್ಟುವ ಕಾರ್ಯ ನಿರಂತರವಾಗಿ ಮುಂದುವರಿಯಲಿದೆ ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಹೇಳಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ದೈಹಿಕ ಶಿಕ್ಷಣ ನಿರ್ದೇಶಕರ ವಾರ್ಷಿಕ ಸಭೆಯಲ್ಲಿ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರೀಡಾ ಸಾಧನೆ ವಿಶ್ವವಿದ್ಯಾಲಯದ ಹೆಮ್ಮೆಯ ಪ್ರತೀಕವಾಗಿದ್ದು, ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕ್ರೀಡಾಪಟುಗಳು ತಮ್ಮ ಸಾಧನೆಯ ಮೂಲಕ ವಿಶ್ವವಿದ್ಯಾಲಯದ ಹೆಸರನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬೆಳಗಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲೂ ವಿಶ್ವವಿದ್ಯಾಲಯದ ಕೀರ್ತಿ ಪಸರಿಸುವಂತೆ ಕ್ರೀಡಾಪಟುಗಳು ಶ್ರಮಿಸಬೇಕು.
ಕ್ರೀಡಾ ಪ್ರತಿಭೆಗಳಿಗೆ ಕೇವಲ ಪ್ರೋತ್ಸಾಹ ನೀಡುವುದಷ್ಟೇ ಅಲ್ಲದೆ, ಉತ್ತಮ ತರಬೇತಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವತ್ತವೂ ವಿಶ್ವವಿದ್ಯಾಲಯ ಗಮನ ಹರಿಸಿದೆ. ಹಿರೇಬಾಗೇವಾಡಿ ಆವರಣದಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದ್ದು, ಒಳಾಂಗಣ ಕ್ರೀಡಾಂಗಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ,ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಗದೀಶ ಗಸ್ತಿ ,ಡಾ. ರವಿ ಗೋಲಾ, ಡಾ. ರಮೇಶ ನಾಗರಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net