ಸದ್ಯ ಬೆಳಗಾವಿ ಮಹಾನಗರ ಪಾಲಿಕೆ ಸೇರಿ ನಗರ ಸ್ಥಳೀಯ ಸಂಸ್ಥೆ, ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿಲ್ಲ.ಕೆಲವು ಕಡೆ ಬೇರೆ ಬೇರೆ ಕಾರಣಗಳಿಂದ ನೀರು ಪೂರೈಕೆಯಲ್ಲಿ ಸಮಸ್ಯೆ ಆಗಿರುವ ಕುರಿತು ದೂರು ಬಂದಿವೆ. ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರಿನ ಎದುರಾಗುವುದಿಲ್ಲ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.ಕೊಳವೆ, ತೆರೆದ ಬಾವಿಗಳಲ್ಲಿನ ನೀರನ್ನು ಮಿತವಾಗಿ ಬಳಸಲು ಎಲ್ಲೆಡೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.