ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಯತ್ನ

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಪ್ರವೇಶ ದ್ವಾರದ ಮೂಲಕ ಮುತ್ತಿಗೆ ಯತ್ನಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಪ್ರವೇಶ ದ್ವಾರದ ಮೂಲಕ ಮುತ್ತಿಗೆ ಯತ್ನಿಸಿದರು.
Published on
ಬೆಳಗಾವಿ: ಇಲ್ಲಿನ ಸುವರ್ಣ ಗಾರ್ಡನ್‌ನಲ್ಲಿ ಭೂ ಸುಧಾರಣೆ ಕಾಯ್ದೆ-2020ರ ತಿದ್ದುಪಡಿ ರದ್ದುಪಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟಿಸಿದರು. ಪ್ರತಿಭಟನಾ ಸ್ಥಳಕ್ಕೆ ಮಧ್ಯಾಹ್ನದವರೆಗೂ ಸರ್ಕಾರದ ಪ್ರತಿನಿಧಿಗಳು ಆಗಮಿಸದ ಹಿನ್ನೆಲೆ ಆಕ್ರೋಶಗೊಂಡ ರೈತರು ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಮುಖ್ಯದ್ವಾರದ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ರೈತರ ಮಧ್ಯೆ ತಳ್ಳಾಟ ನಡೆಯಿತು. ರೈತರನ್ನು ತಡೆದ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಸಚಿವರಾದ ಮಧು ಬಂಗಾರಪ್ಪ, ಈಶ್ವರ ಖಂಡ್ರೆ ಭೇಟಿ ನೀಡಿ ರೈತರ ಮನವಿ ಆಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net