ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ

 ಬೆಂಕಿ ಹಚ್ಚಿ ಕೊಲೆಗೆ ಯತ್ನ
ಬೆಂಕಿ ಹಚ್ಚಿ ಕೊಲೆಗೆ ಯತ್ನ
Published on
ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಪತಿ ಕೃಷ್ಣಾಜಿ ಪಾಟೀಲ (29) ನಂದಗಡ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಖಾನಾಪುರ ತಾಲೂಕಿನ ನಂದಗಡ ಗ್ರಾಮದ ಮಂಜುಳಾ ಪಾಟೀಲ (27) ತೀವ್ರ ಗಾಯಗೊಂಡಿದ್ದಾರೆ. ಏ.19ರಂದು ಮನೆಯಲ್ಲಿ ಗೌನ್ ಹಾಕಿಕೊಳ್ಳುವ ಸಲುವಾಗಿ ಪತ್ನಿ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ.
ಕೂಡಲೇ ಗಾಯಗೊಂಡ ಮಹಿಳೆಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಈ ಕುರಿತು ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net