ಪ್ರಯಾಣಿಕರು ಮತ್ತು ಸಿಬ್ಬಂದಿಗಾಗಿ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರಗಳು ನಡೆದವು. ನಿಲ್ದಾಣದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಸುತ್ತಮುತ್ತಲಿನ ಗ್ರಾಮಗಳ ಸರ್ಕಾರಿ ಶಾಲೆಗಳ ಮಕ್ಕಳು ನಿಲ್ದಾಣಕ್ಕೆ ಆಗಮಿಸಿ, ವೀಕ್ಷಿಸಿದರು. ಇವರಿಗೆ ಪೈಲಟ್, ಎಟಿಸಿ ಅಧಿಕಾರಿ ಸೇರಿದಂತೆ ನಾಗರಿಕ ವಿಮಾನಯಾನ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಪಡೆಯಲು ಆಯ್ದುಕೊಳ್ಳಬೇಕಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಲಾಯಿತು.