ಬೆಳಗಾವಿ:ವಿದ್ಯಾರ್ಥಿಗಳು ಅತಿಯಾದ ಮೊಬೈಲ್ ಬಳಕೆಯಿಂದ ದೂರವಿದ್ದು, ಗುರಿ ಸಾಧನೆಯತ್ತ ಗಮನ ನೀಡಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಹನುಮಂತರಾಯ ಹೇಳಿದರು.
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಲ್ಲಿ ಎನ್‌ಎಸ್‌ಎಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಜಾಗತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾನೂನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಸ್ತು, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು ಎಂದರು.
ವಿಟಿಯು ಕುಲಪತಿ ಎಸ್.ವಿದ್ಯಾಶಂಕರ ಮಾತನಾಡಿ, ವಿಶ್ವವಿದ್ಯಾಲಯದ ಅವಕಾಶಗಳು ಹಾಗೂ ತಾಂತ್ರಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಪ್ರೊ.ಪ್ರಸಾದ ರಾಂಪುರೆ, ಡಾ.ಪ್ರಶಾಂತ ನಾಯಕ, ಡಾ.ಯು.ಜೆ.ಉಜ್ವಲಾ ಇತರರಿದ್ದರು.