ವಿಶ್ವ ಕಿಡ್ನಿ ದಿನ ಕುರಿತು ಜಾಗೃತಿ

ನೇರ ಫೋನ್-ಇನ್
ನೇರ ಫೋನ್-ಇನ್
Published on
ಬೆಳಗಾವಿ: ಕೆಎಲ್‌ಇ ವೇಣುಧ್ವನಿ ಎಫ್.ಎಂ. ಕೇಂದ್ರದಲ್ಲಿ ಕೆಎಲ್‌ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಎಲ್‌ಇ ಆಸ್ಪತ್ರೆ ತಜ್ಞ ವೈದ್ಯ ಡಾ.ರಿತೇಶ ವರ್ಣೇಕರ ಕಿಡ್ನಿ ಸಮಸ್ಯೆಗಳಿಗೆ ಕಾರಣ, ಪರಿಹಾರ, ಮುಂಜಾಗ್ರತೆ ಕ್ರಮಗಳು ಮತ್ತು ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ಕೆಎಲ್‌ಇ ಆಸ್ಪತೆಯಲ್ಲಿ ಕಿಡ್ನಿ ಸಮಸ್ಯೆಗಳಿಗೆ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆಗಳು, ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡ ಅವರು, ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ನಿರ್ವಾಹಕಿ ಮನೀಷಾ ಪಿ.ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net