ಬೆಳಗಾವಿ ನಮ್ಮದೇ ನಿರ್ಣಯ ಕೈಗೊಳ್ಳಿ

ಬೆಳಗಾವಿ ನಗರದ ಪಾಲಿಕೆ ಆವರಣದಲ್ಲಿ ಗುರುವಾರ ಕನ್ನಡಪರ ಸಂಘಟನೆಗಳ ಮುಖಂಡರು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿಗೆ ಮನವಿ ಸಲ್ಲಿಸಿದರು. ಅಶೋಕ ಚಂದರಗಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಇತರರಿದ್ದರು.
ಬೆಳಗಾವಿ ನಗರದ ಪಾಲಿಕೆ ಆವರಣದಲ್ಲಿ ಗುರುವಾರ ಕನ್ನಡಪರ ಸಂಘಟನೆಗಳ ಮುಖಂಡರು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿಗೆ ಮನವಿ ಸಲ್ಲಿಸಿದರು. ಅಶೋಕ ಚಂದರಗಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಇತರರಿದ್ದರು.
Published on
ಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್‌ಗೆ ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಪಾಲಿಕೆಯಲ್ಲಿ ಗುರುವಾರ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿ ಅವರನ್ನು ಸನ್ಮಾನಿಸಿ ಹಲವು ಬೇಡಿಕೆ ಒಳಗೊಂಡಿರುವ ಮನವಿ ಸಲ್ಲಿಸಿದರು.
2005 ಅಕ್ಟೋಬರ್ 10ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಮೇಯರ್, ಉಪಮೇಯರ್ ಅವರು ಪರಿಷತ್ ಸಭೆಯಲ್ಲಿ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಬಹುಮತ ನಿರ್ಣಯ ಕೈಗೊಂಡು ಮಹಾರಾಷ್ಟ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿದ್ದರು.
ಇದು ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಅಡ್ಡಿಯಾಗಿದೆ. ಇದಕ್ಕೆ ಪ್ರತಿಯಾಗಿ ಪಾಲಿಕೆ ಆಡಳಿತ ಮಂಡಳಿ ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಒತ್ತಾಯಿಸಿದರು.
ಪಾಲಿಕೆಯ 58ರ ಪೈಕಿ 55 ಸದಸ್ಯರು ಕನ್ನಡಿಗರೇ ಇದ್ದಾರೆ. ಅಲ್ಲದೆ, ಕನ್ನಡ ಭಾಷಿಕ ಮೇಯರ್, ಉಪಮೇಯರ್ ಆಗಿದ್ದರಿಂದ ಕನ್ನಡಪರ ನಿರ್ಣಯ ಕೈಗೊಂಡು ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಕಳುಹಿಸಬೇಕು. ವಿಳಂಬ ಮಾಡದೆ ತಕ್ಷಣ ಸಾಮಾನ್ಯ ಸಭೆ ಕರೆದು
ಠರಾವು ಪಾಸ್ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿದವು.
ಈ ಸಂದರ್ಭದಲ್ಲಿ ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಇತರರಿದ್ದರು.
"

ಮಹಾರಾಷ್ಟ್ರ ಪರ ನಿರ್ಣಯ ಕೈಗೊಂಡಿದ್ದ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲೇ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಮಹಾಜನ ವರದಿಯೇ ಅಂತಿಮ ಎಂಬ ನಿರ್ಣಯ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ, ಬೆಳಗಾವಿ ಹಿತಾಸಕ್ತಿ ಕಾಪಾಡಲು ಇಂತಹ ನಿರ್ಣಯ ಅವಶ್ಯ. ಇದಕ್ಕೆ ಪಾಲಿಕೆ ಮೇಯರ್, ಉಪಮೇಯರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

"

ಅಶೋಕ ಚಂದರಗಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯಕನ್ನಡಪರ ಸಂಘಟನೆ ಸಲ್ಲಿಸಿರುವ ಮನವಿ ಕುರಿತು ಪಾಲಿಕೆಯ ಎಲ್ಲ ಸದಸ್ಯರು, ಕಾನೂನು ಸಲಹೆಗಾರರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net