ಬೆಳಗಾವಿ ವಸ್ತುಪ್ರದರ್ಶನಕ್ಕೆ ಚಾಲನೆ

ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನವನ್ನು ಸಚಿವ ಸತೀಶ ಜಾರಕಿಹೊಳಿ ಭಾನುವಾರ ಉದ್ಘಾಟಿಸಿದರು. ಆಸೀಫ್ ಸೇಠ್, ಸುನೀಲ ಹನುಮಣ್ಣವರ, ಲಕ್ಷ್ಮಣರಾವ್ ಚಿಂಗಳೆ ಇತರರಿದ್ದರು.
ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನವನ್ನು ಸಚಿವ ಸತೀಶ ಜಾರಕಿಹೊಳಿ ಭಾನುವಾರ ಉದ್ಘಾಟಿಸಿದರು. ಆಸೀಫ್ ಸೇಠ್, ಸುನೀಲ ಹನುಮಣ್ಣವರ, ಲಕ್ಷ್ಮಣರಾವ್ ಚಿಂಗಳೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟನೆ
  • 40 ದಿನಗಳ ವಸ್ತುಪ್ರದರ್ಶನ
  • 15 ಇಲಾಖೆಯಿಂದ ಮಳಿಗೆ
ಬೆಳಗಾವಿ: ಮೈಸೂರು ದಸರಾ ಸಂದರ್ಭದಲ್ಲಿ ಮಾತ್ರ ಜರುಗುವ ವಿಶೇಷ ವಸ್ತುಪ್ರದರ್ಶನ ಇದೇ ಮೊದಲ ಬಾರಿಗೆ ಹೊರಗಡೆ ಅದೂ ಬೆಳಗಾವಿಯಲ್ಲಿ ಜರುಗುತ್ತಿರುವುದು ಸಂತಸದ ಸಂಗತಿಯಾಗಿದ್ದು, ಕಿತ್ತೂರು ಕರ್ನಾಟಕ ಭಾಗದ ಜನ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನಗರದ ಸಿಪಿಇಡಿ ಮೈದಾನದಲ್ಲಿ ಏರ್ಪಡಿಸಿರುವ 40 ದಿನಗಳ ಬೆಳಗಾವಿ ವಸ್ತುಪ್ರದರ್ಶನ-2025ನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಈ ವಸ್ತು ಪ್ರದರ್ಶನದಲ್ಲಿ 15 ಇಲಾಖೆಯಿಂದ ಮಳಿಗೆ ಸ್ಥಾಪಿಸಲಾಗಿದೆ. ವಸ್ತುಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಜನಪರ ಯೋಜನೆ ಮಾಹಿತಿ ಜತೆಗೆ ಮನರಂಜನೆ, ಆಹಾರ ಮಳಿಗೆಗಳಿವೆ ಎಂದರು.
ಶಾಲಾ ಕಾಲೇಜು ಮಕ್ಕಳಿಗೆ ಸಮಯ ನಿಗದಿಪಡಿಸಿ ವಸ್ತುಪ್ರದರ್ಶನಕ್ಕೆ ಕರೆ ತರುವ ಕೆಲಸವನ್ನು ಶಿಕ್ಷಣ ಇಲಾಖೆ ಮಾಡಬೇಕು. ಅದೇ ರೀತಿ ಗ್ರಾಮ ಪಂಚಾಯಿತಿ ಮಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಸ್ತುಪ್ರದರ್ಶನಕ್ಕೆ ಬರುವಂತೆ ಗ್ರಾಪಂ ಮಟ್ಟದಲ್ಲಿ ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.
ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ, ಮುಖ್ಯಮಂತ್ರಿಗಳ ಅನುಮತಿ ಪಡೆದು ಕೇವಲ ಮೈಸೂರು ಜಿಲ್ಲೆಗೆ ಸಿಮೀತವಾಗಿದ್ದ ಪ್ರದರ್ಶನವನ್ನು ಉತ್ತರ ಕರ್ನಾಟಕದ ಬೆಳಗಾವಿ ಭಾಗದಲ್ಲಿ ಆಯೋಜಿಸಲಾಗಿದೆ. ಮುಂದೆ ಬೇರೆ ಬೇರೆ ಜಿಲ್ಲೆಗಳಲ್ಲೂ ಆಯೋಜಿಸುವ ಉದ್ದೇಶವಿದೆ ಎಂದರು.
ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ವಾಕರಸಾ ಸಂಸ್ಥೆ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಪಂ ಸಿಇಒ ರಾಹುಲ ಶಿಂಧೆ, ಡಾ.ಗಿರೀಶ, ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net