ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ

ಬೆಳಗಾವಿಯಲ್ಲಿ ಗುರುವಾರ ಸಿದಗೌಡ ಮೋದಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಳಗಾವಿಯಲ್ಲಿ ಗುರುವಾರ ಸಿದಗೌಡ ಮೋದಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on
ಬೆಳಗಾವಿ: ಬಿಡದಿ ಟೌನ್‌ಶಿಪ್ ಯೋಜನೆಯಿಂದ 25 ಗ್ರಾಮಗಳ 9,640 ಎಕರೆ ಕೃಷಿ ಭೂಮಿ ನಾಶವಾಗಲಿದ್ದು, ರೈತರಿಗೆ ಜೀವನಾಧಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಆದ್ದರಿಂದ ಈ ಯೋಜನೆಗೆ ನೀಡಿರುವ ಅನುಮೋದನೆ ಹಿಂಪಡೆಯಬೇಕು ಎಂದು ಭಾರತೀಯ ಕೃಷಿಕ ಸಮಾಜ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭಾಗದಲ್ಲಿ ತೆಂಗು, ಮಾವು, ಭತ್ತ, ರಾಗಿ ಸೇರಿ ವಿವಿಧ ಬೆಳೆಗಳನ್ನು ಬೆಳೆದು ರೈತರು ಜೀವನ ಸಾಗಿಸುತ್ತಿದ್ದಾರೆ. ಇಂತಹ ಕೃಷಿ ಪ್ರಧಾನ ಪ್ರದೇಶವನ್ನು ಟೌನ್‌ಶಿಪ್ ಹೆಸರಿನಲ್ಲಿ ನಗರೀಕರಣಗೊಳಿಸುತ್ತಿರುವುದು ರೈತ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಸದಾಕಾಲ ರೈತರ ಪರ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಹಿಂಬದಿಯಿಂದ ರೈತರ ಜಮೀನಿಗೆ ಕನ್ನ ಹಾಕುವ ಹುನ್ನಾರ ಮಾಡುತ್ತಿರುವುದು ಖಂಡನೀಯ. ಈ ಯೋಜನೆ ವಿರೋಧಿಸಿ 2023ರಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಆಕ್ರೋಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹೀಗಾಗಿ, ಇದರ ವಿರುದಟಛಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಜೀವ ಡೊಂಗರಗಾವಿ, ರಾಮನಗೌಡ ಪಾಟೀಲ, ಮಲ್ಲಿಕಾರ್ಜುನ ಮೂಗಪ್ಪನವರ, ಮಲ್ಲನಗೌಡ ಪಾಟೀಲ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net