ಬೆಳಗಾವಿ: ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದ ಬೈಕ್ ಸವಾರ ಲಕ್ಷ್ಮಣ ಪೂಜೇರಿ (26) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಂಗಳವಾರ ಮಾಲದಿನ್ನಿ ಗ್ರಾಮದ ಗೋಕಾಕ-ಯರಗಟ್ಟಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸಿಮೆಂಟ್ ಟ್ಯಾಂಕ್‌ನಲ್ಲಿ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.