ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯ ಅಹೋರಾತ್ರಿ ಧರಣಿ
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾದರಿಂದ ಬಿಜೆಪಿ ನಗರ, ಗ್ರಾಮೀಣ ಘಟಕದ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭಗೊಂಡಿದೆ. ಮಹಾಂತೇಶ ಕವಟಗಿಮಠ, ಅಣ್ಣಾಸಾಹೇಬ ಜೋಲ್ಲೆ, ಅಭಯ ಪಾಟೀಲ, ಅನಿಲ ಬೆನಕೆ ಇತರರಿದ್ದರು.
Published on:
Copied
Follow Us
ಬೆಳಗಾವಿ:
ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಪ್ರಮುಖ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ನಗರ, ಗ್ರಾಮೀಣ ಘಟಕ ಬಿಜೆಪಿ ಅಹೋರಾತ್ರಿ ಹೋರಾಟದ ಕಹಳೆ ಮೊಳಗಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರದಿಂದ ಬಿಜೆಪಿ ಆರಂಭಿಸಿರುವ ಅಹೋರಾತ್ರಿ ಧರಣಿಗೆ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಿಂದ ಹಾಲಿ, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ನೂರಾರು ಕಾರ್ಯಕರ್ತರು ಹಾಗೂ ವಿವಿಧ ಘಟಕದ ಪಕ್ಷದ ಪದಾಧಿಕಾರಿಗಳು, ಧರಣಿಯಲ್ಲಿ ಭಾಗವಹಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಅಹೋರಾತ್ರಿಧರಣಿಯ ಮೊದಲ ದಿನವೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಹಗರಣದ ಹೊಣೆ ಹೊತ್ತ ಸಚಿವ ಬಿ.ನಾಗೇಂದ್ರ ಅವರು ತಕ್ಷಣ ರಾಜೀನಾಮೆ ಪಡೆದುಕೊಳ್ಳಬೇಕು.ಸ್ವತಃ ಮುಖ್ಯಮಂತ್ರಿಗಳೇ ಸಚಿವರನ್ನು ರಕ್ಷಣೆ ಮಾಡು ಹರಸಾಹಸ ಪಡುತ್ತಿದ್ದು, ವಾಲ್ಮೀಕಿ ನಿಗಮಯದ ಕೋಟ್ಯಂತರ ರೂ. ಹಗರಣ ಮುಚ್ಚಿ ಹಾಕಲು ಸರ್ಕಾರವು ಪ್ರಯತ್ನಿಸುತ್ತಿದೆ. ಅಲ್ಲದೆ, ತನಿಖಾ ತಂಡಗಳಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನು ಸರ್ಕಾರವೇ ಮಾಡುತ್ತಿದೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ವಾಲ್ಮೀಕಿ ಹಗರಣದ ಆರೋಪ ಕೇಳಿದ ತಕ್ಷಣವೇ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಿದ್ದರು.ಆದರೆ, ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಿ. ನಾಗೇಂದ್ರನನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇಂತಹ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಭಾಗಹಿಸುತ್ತಿರುವುದು ಆಡಳಿತ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಮುಖಂಡರು ವಾಗ್ದಾಳಿ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಶಾಸಕ ಅಭಯ್ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಹೇಶ ಕುಮಟಳ್ಳಿ, ಡಾ. ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಎಂ.ಬಿ. ಜಿರಲಿ, ಬಸವರಾಜ ಹುಂದ್ರಿ, ಡಾ. ರವಿ ಪಾಟೀಲ, ಮುರೇಂದ್ರಗೌಡ ಪಾಟೀಲ ಇತರರಿದ್ದರು.
...........................
ಬಾಕ್ಸ್
ಹಾಡಿನ ಮೂಲಕವೂ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಭಜನಾ, ಜಾನಪದ ಹೀಗೆ ವಿವಿಧ ತಂಡಗಳು ಹಾಡಿನ ಮೂಲಕ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರತಿಭಟನೆಯ ಸಂದೇಶ ಸಾರಿದ್ದು ವಿಶೇಷ ಗಮನ ಸೆಳೆಯಿತು. ಭಜನಾ ಗಾಯನದ ಮೂಲಕ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿನೂತನ ಪ್ರತಿಭಟನೆ ಗಮನ ಸೆಳೆಯಿತು.
..........
ಬಾಕ್ಸ್
ಪ್ರತಿ ದಿನ ಎರಡು ಕ್ಷೇತ್ರಕ್ಕೆ ಜವಾಬ್ದಾರಿ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಪ್ರತಿದಿನ ಎರಡೆರಡು ವಿಧಾನಸಭಾ ಕ್ಷೇತ್ರದ ಹಾಲಿ, ಮಾಜಿ ಶಾಸಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 8 ಗಂಟೆಯವರೆಗೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರಿ ಧರಣಿ ನಡೆಸಲಿದ್ದಾರೆ. ಬೆಳಗ್ಗೆ ಉಪಹಾರ, ಮಧ್ಯಾಹ್ನ,ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ಸಚಿವರ ರಾಜೀನಾಮೆ ಪಡೆಯುವವರೆಗೆ ಧರಣಿ ಮುಂದುವರಿಯಲಿದೆ ಪಕ್ಷದ ಮುಖಂಡರು ತಿಳಿಸಿದರು.
ಕೋಟ್ಸ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ಸಂಪೂರ್ಣ ಕುಸಿದಿದ್ದು, ಆಡಳಿತ ವ್ಯವಸ್ಥೆಯೇ ಭ್ರಷ್ಟಾಚಾರದಲ್ಲಿ ಮುಳಗಿದ್ದು, ರೈತರು, ಬಡವರು, ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಆದರೆ, ಸರ್ಕಾರ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಸರ್ಕಾರವು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕಠಿಣ ದಿನಗಳನ್ನು ಎದುರಿಸಬೇಕಾಗುತ್ತದೆ.
-ಮಹಾಂತೇಶ ಕವಟಗಿಮಠ , ಮಾಜಿ ವಿಧಾನಪರಷತ್ತಿನ ಸದಸ್ಯ
..........
ಕೋಟ್ಸ್
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಪ್ರಮುಖ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ವಿರುದ್ಧ ತನಿಖೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅವರನ್ನು ಮರಳಿ ಸಚಿವರನ್ನಾಗಿ ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡಿದಂತಾಗಿದೆ. ಅಲ್ಲದೆ, ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ.