ಬಿಜೆಪಿ ರೈತಪರ ಇಲ್ಲ - ರಾಮಲಿಂಗಾರೆಡ್ಡಿ ತಿರುಗೇಟು

ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ
Published on
ಬೆಳಗಾವಿ: ಬಿಜೆಪಿ ಸರ್ಕಾರವಿದ್ದಾಗ ರೈತರ ಪರ ನಿಂತಿರಲಿಲ್ಲ. ರೈತರ ಮೇಲೆ ಗೋಲಿಬಾರ್ ಆಗಿದ್ದು ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರೈತರ ಸಾಲವನ್ನೂ ಮನ್ನಾ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಾಂಗ್ರೆಸ್ ರೈತ ವಿರೋಧಿ ಎಂದು ಆರೋಪಿಸಿ ಬಿಜೆಪಿ ಪ್ರತಿಭಟಿಸಿದ ವಿಚಾರಕ್ಕೆ ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕಬ್ಬು ಮತ್ತು ಮೆಕ್ಕೆಜೋಳದ ಸಮಸ್ಯೆ ಬಗೆಹರಿಸಿದ್ದೇವೆ.
ಈಗ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ರೈತರ ಬಗ್ಗೆ ನಮ್ಮಷ್ಟು ಕಾಳಜಿ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.
ಸಾಲ ಮನ್ನಾ ಮಾಡಲು ಹಣದ ಪ್ರಿಂಟಿಂಗ್ ಮಷಿನ್ ಇಲ್ಲ ಎಂದು ಯಡಿಯೂರಪ್ಪ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಹೇಳಿದ್ದರು. ಕೇಂದ್ರ ಸರ್ಕಾರ ರೈತರ ವಿಚಾರದಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಅವರ ಜವಾಬ್ದಾರಿ ನಮ್ಮ ಮೇಲೆ ಹಾಕುತ್ತಿದ್ದಾರೆ ಎಂದರು.
ಪರಿಷತ್ ಸದಸ್ಯ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆಸಿದ ಅವರು, ಸಿಎಂ ಕುರ್ಚಿ ವಿಚಾರ ಸೇರಿ ಯಾವುದನ್ನೂ ಮಾತನಾಡಬಾರದು ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಳಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net