ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು. ಮಹಾದೇವ ಶೆಕ್ಕಿ, ಸುಭಾಸ ಪಾಟೀಲ, ಲಕ್ಷ್ಮಣ ತಪಸಿ, ಮುತ್ತೆಪ್ಪ ಮನ್ನಾಪುರ, ಪರಸಪ್ಪ ಬಬಲಿ ಇತರರಿದ್ದರು.
ಎನ್‌ಎಸ್‌ಎಫ್ ಕಚೇರಿಯಲ್ಲಿ ಅರಬಾವಿ ಬಿಜೆಪಿ ಮಂಡಲದಿಂದ ಶುಕ್ರವಾರ ಸಂಭ್ರಮಾಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನೇತತ್ವದಲ್ಲಿ ಭಾರತ ಜಗತ್ತಿನಲ್ಲಿಯೇ ಪ್ರಗತಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೆ ಅಭಿವದ್ಧಿಗೆ ಅನುಕೂಲವಾಗಲಿದೆ. ಇದರಿಂದ ಮತ್ತಷ್ಟು ಶರವೇಗದಲ್ಲಿ ಪ್ರಗತಿ ಸಾಧಿಸಲು ನೆರವಾಗುತ್ತದೆ. ಬಿಜೆಪಿ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ. ಕಾರ್ಯಕರ್ತರಿಂದ ಮಾತ್ರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ ಎಂದರು.
ನರೇಂದ್ರ ಮೋದಿ ಅವರು ದೀರ್ಘಾವಧಿ ಪ್ರಧಾನಮಂತ್ರಿಯಾಗುವ ಮೂಲಕ ಜವಾಹರಲಾಲ್ ನೆಹರು ದಾಖಲೆ ಅಳಿಸಿದ್ದಾರೆ. ನಮ್ಮ ದೇಶಕ್ಕೆ ಮೋದಿಯವರಂತಹ ದಕ್ಷ, ಪಾರದರ್ಶಕ ಪ್ರಧಾನಮಂತ್ರಿ ಬೇಕು. ಇನ್ನಷ್ಟು ಕಾಲ ಈ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಮೋದಿಯವರಿಗೆ ದೇವರು ಆಯಸ್ಸು, ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಅರಬಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಮುತ್ತೆಪ್ಪ ಮನ್ನಾಪುರ, ಪರಸಪ್ಪ ಬಬಲಿ, ಪ್ರಮೋದ ನುಗ್ಗಾನಟ್ಟಿ ಇತರರಿದ್ದರು.