ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯ ಬಾಯ್ಲರ್ ಘಟಕದಲ್ಲಿ ಒಟ್ಟು ಜನರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕುದಿಯುತ್ತಿರುವ ರಾಸಾಯನಿಕ ದ್ರವ ಪದಾರ್ಥ ಸಿಡಿದು ಎಂಟು ಜನ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ದೀಪಕ ಮುನವಳ್ಳಿ (32), ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಅಕ್ಷಯ ಚೊಪಡೆ (42), ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ (25), ಅಥಣಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಮಂಜುನಾಥ ತೇರದಾಳ (31), ಜಮಖಂಡಿ ತಾಲೂಕಿನ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮಣ್ಣವರ (38), ಗೋಕಾಕ ತಾಲೂಕಿನ ಗೊಡಚಿಮಲ್ಕಿ ಗ್ರಾಮದ ಭರತೇಶ ಸಾರವಾಡಿ (27) ಹಾಗೂ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜುನಾಥ ಕಾಜಗಾರ (28) ಮೃತಪಟ್ಟಿದ್ದಾರೆ. ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದ ರಾಘವೇಂದ್ರ ಗಿರಿಯಾಳ (36) ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.