ಬೆಳಗಾವಿ ನಗರದ ಗೋಮಟೇಶ ವಿದ್ಯಾಪೀಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿ.ಎಸ್.ವೈ.ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಅಭಿಮಾನೋತ್ಸವದ ಕಾರ್ಯಕ್ರಮದ ಪೋಸ್ಟರ ಬಿಡುಗಡೆಗೊಳಿಸಿದರು. ಮಹಾಂತೇಶ ಕವಟಗಿಮಠ, ಸುಭಾಷ ಪಾಟೀಲ, ವಿಠ್ಠಲ ಹಲಗೇಕರ್,ಅರವಿಂದ ಪಾಟೀಲ ಇತರರಿದ್ದರು.
ಬೆಳಗಾವಿ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ 50 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ರೈತರು, ಶೋಷಿತರು, ಬಡವರ ಪರವಾಗಿ ಹೋರಾಟ ಮಾಡಿದವರು. ಯುವ ಸಮುದಾಯಕ್ಕೆ, ರಾಜಕಾರಣಗಳಿಗೆ ಮಾದರಿ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಬೆಳಗಾವಿ ನಗರದ ಗೋಮಟೇಶ ವಿದ್ಯಾಪೀಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿ.ಎಸ್.ವೈ.ಅಭಿಮಾನೋತ್ಸವ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪನವರು ಪರಿಶ್ರಮದಿಂದ ರಾಜ್ಯದಲ್ಲಿ ಬಿಜೆಪಿ ಸಂಘಟನೆ ಮಾಡಿದರು. ಪ್ರಾಮಾಣಿಕವಾಗಿ ಎಲ್ಲ ಸಮುದಾಯದ ಪರವಾಗಿ ಧ್ವನಿ ಎತ್ತುವ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದರು. ಯಡಿಯೂರಪ್ಪ ಒಂದು ಸಮುದಾಯದ ನಾಯಕರಲ್ಲ. ನಾಡಿನ ಎಲ್ಲ ಸಮುದಾಯವರ ನಾಯಕ ಹೇಳಿದರು.
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ,ಈಗಲೂ ಬಿ.ಎಸ್.ಯಡಿಯೂರಪ್ಪ ಹೆಸರು ಕೇಳಿದರೆ ಕಾರ್ಯಕರ್ತರಲ್ಲಿ ರೋಮಾಂಚಕ ಆಗುತ್ತದೆ.ಯಡಿಯೂರಪ್ಪ ಅವರ ಸುದೀರ್ಘ ರಾಜಕೀಯ ಹೋರಾಟವನ್ನು ಮೆಲುಕು ಹಾಕುವುದು ಮತ್ತು ರಾಜ್ಯ ಬಿಜೆಪಿಗೆ ಹೊಸ ಶಕ್ತಿ ತುಂಬುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದರು.
ಶಾಸಕ ವಿಠ್ಠಲ ಹಲಗೇಕರ ಮಾತನಾಡಿ ಇದು ಪಕ್ಷಾತೀತ ಕಾರ್ಯಕ್ರಮ ಇದು ಕೇವಲ ಒಂದು ಪಕ್ಷಕ್ಕೆ ಸೀಮಿತವಾಗದೇ ಎಲ್ಲಾ ವರ್ಗದ ಜನರು ಮತ್ತು ಮಠಾಧೀಶರನ್ನು ಒಳಗೊಂಡ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಅರವಿಂದ ಪಾಟೀಲ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ,ಮಲ್ಲಿಕಾರ್ಜುನ ಮಾದಮ್ಮನವರ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ ಇತರರಿದ್ದರು.