

ಬೆಳಗಾವಿ :
ವಿದ್ಯಾರ್ಥಿಗಳು ಸತತವಾಗಿ ಅಧ್ಯಯನ ಮಾಡಿದರೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೊರಗಿದ ಬೆಳೆಯದೆ ಒಳಗಿಂದ ಜ್ಞಾನದ ಮೂಲಕ ಬೆಳೆಯಬೇಕು. ಉತ್ತರ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆಯ ಶೈಕ್ಷಣಿಕ ಕ್ರಾಂತಿ ಮಾಡಿದೆ. ಇಲ್ಲಿ ಸಿಗುವ ಸೌಲಭ್ಯ ಸದುಪಯೋಗ ಪಡೆಸಿಕೊಂಡು, ವಿಜ್ಞಾನಿಗಳ ಬಗ್ಗೆ ಪರಿಚಯ ಮಾಡಿಕೊಂಡು ಬೆಳೆಯಬೇಕು ಎಂದು ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಹೇಳಿದರು.