ಬಸ್‌ನಿಂದ ವಿದ್ಯಾರ್ಥಿಗಳಿಗೆ ಅನುಕೂಲ

ರಾಯಬಾಗ ಆರ್‌ವಿಆರ್ ಪ್ರೌಢಶಾಲೆ ಆವರಣದಲ್ಲಿ ಶಾಲಾ ಬಸ್‌ಗಳಿಗೆ ಅಮರಸಿಂಹ ಪಾಟೀಲ, ಸಂಸ್ಥೆ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ ಚಾಲನೆ ನೀಡಿದರು. ಶಶಿಕಲಾ ಸಿಂಗಾಡಿ ಇತರರು ಇದ್ದರು.
ರಾಯಬಾಗ ಆರ್‌ವಿಆರ್ ಪ್ರೌಢಶಾಲೆ ಆವರಣದಲ್ಲಿ ಶಾಲಾ ಬಸ್‌ಗಳಿಗೆ ಅಮರಸಿಂಹ ಪಾಟೀಲ, ಸಂಸ್ಥೆ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ ಚಾಲನೆ ನೀಡಿದರು. ಶಶಿಕಲಾ ಸಿಂಗಾಡಿ ಇತರರು ಇದ್ದರು.
Published on
ರಾಯಬಾಗ: ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲು ಎರಡು ಸುಸಜ್ಜಿತ ಶಾಲಾ ಬಸ್ ಪ್ರಾರಂಭಿಸಲಾಗಿದೆ ಎಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಹೇಳಿದರು.
ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆರ್‌ವಿಆರ್ ಪ್ರೌಢಶಾಲೆ ಆವರಣದಲ್ಲಿ ಬುಧವಾರ ಶಾಲಾ ಬಸ್‌ಗೆ ಚಾಲನೆ ನೀಡಿ ಮಾತನಾಡಿದರು.
ಸಂಸ್ಥೆ ಕಾರ್ಯದರ್ಶಿ ಶಶಿಕಲಾ ಸಿಂಗಾಡಿ ಮಾತನಾಡಿ, ಅಭಾಜಿ ಅವರು ಕಟ್ಟಿದ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಯುಕೆಜಿಯಿಂದ ಸ್ನಾತಕೋತ್ತರ ಪದವಿ ವರೆಗೆ ಎಲ್ಲ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕ್ಯಾಮರಾ ಮತ್ತು ಜಿಪಿಎಸ್ ಅಳವಡಿಸಿರುವ ಬಸ್ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಸಂಸ್ಥೆ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net