ಭಾರತೀಯ ಸೇನೆಯಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಸಾಕಷ್ಟು ಅವಕಾಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳಿಗೆ ಹೋಗಲು ಪ್ರಯತ್ನಿಸಬೇಕು. ತಂದೆ-ತಾಯಿ ಕನಸುಗಳನ್ನು ಈಡೇರಿಸಿದರೆ ಅದಕ್ಕಿಂತ ದೊಡ್ಡ ಸಾಧನೆ ಮತ್ತೊಂದಿಲ್ಲ. ಬಟಾಲಿಯನ್ ಕೀರ್ತಿ ಹೆಚ್ಚಿಸಿದ ಕೆಡೆಟ್‌ಗಳು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾರ್ಚಾಯ ಡಾ.ಎಚ್.ಎಸ್.ಮೇಲಿನಮನಿ ಮಾತನಾಡಿ, ಕಾಲೇಜು ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದೆ. ಎನ್‌ಸಿಸಿ, ಎನ್‌ಎಸ್‌ಎಸ್, ಕ್ರೀಡಾ ಘಟಕಗಳು ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಪರ್ಧಾತ್ಮಕ ದಿನಗಳಲ್ಲಿ ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದರು.