ಕುರವಿನಕೊಪ್ಪ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಡಿ.ಡಿ.ಟೋಪೋಜಿ, ಶಂಕ್ರಯ್ಯ ಪಾಟೀಲ, ಸುರೇಶ ಬಡಗಿಗೌಡ್ರ ಇತರರಿದ್ದರು.
ಸವದತ್ತಿ: ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಗ್ರಾಮೀಣ ರಸ್ತೆಗಳ ಸುಧಾರಣೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಮೂಲ ಸೌಕರ್ಯ ಯೋಜನೆಯಡಿ ಕೈಗೆತ್ತಿಕೊಳ್ಳಲಾದ 1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಔರಾದ-ಸದಾಶಿವಗಡ ರಾಜ್ಯ ಹೆದ್ದಾರಿ-34ರಿಂದ ಕುರುವಿನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಹಾಗೂ ರೈತರು ಅನುಭವಿಸುತ್ತಿದ್ದ ಸಂಚಾರ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಶಿಂದೋಗಿ ಗ್ರಾಪಂ ಅಧ್ಯಕ್ಷ ಡಿ.ಡಿ.ಟೋಪೋಜಿ, ಶಂಕ್ರಯ್ಯ ಪಾಟೀಲ, ಸುರೇಶ ಬಡಗಿಗೌಡ್ರ, ಶಿವಾಜಿ ಅಣ್ಣಪ್ಪನವರ, ಪರಸು ಯಕ್ಕುಂಡಿ, ನಾಗರಾಜ ರಾಹುತ, ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇತರರಿದ್ದರು.