ಪಕ್ಷ ನೀಡಿದ ಹೊಣೆ ಸಮರ್ಥವಾಗಿ ನಿಭಾಯಿಸಿ

ಅಂಕಲಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮಾಂತರ ಜಿಲ್ಲೆ ಬಿಜೆಪಿ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಹೇಶ ಮೋಹಿತೆ ಮಾತನಾಡಿದರು. ಅಂಬಿರಾವ ಪಾಟೀಲ, ಅಮರನಾಥ ಜಾರಕಿಹೊಳಿ, ಭೀಮಶಿ ಭರಮಣ್ಣವರ, ರಾಜೇಂದ್ರ ಗೌಡಪ್ಪಗೋಳ ಇತರರಿದ್ದರು.
ಅಂಕಲಗಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮಾಂತರ ಜಿಲ್ಲೆ ಬಿಜೆಪಿ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಹೇಶ ಮೋಹಿತೆ ಮಾತನಾಡಿದರು. ಅಂಬಿರಾವ ಪಾಟೀಲ, ಅಮರನಾಥ ಜಾರಕಿಹೊಳಿ, ಭೀಮಶಿ ಭರಮಣ್ಣವರ, ರಾಜೇಂದ್ರ ಗೌಡಪ್ಪಗೋಳ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖಂಡ ಮಹೇಶ ಮೋಹಿತೆ ಕರೆ
  • ಜಿಲ್ಲಾ ಪ್ರಶಿಕ್ಷಣ ವರ್ಗದ ಸಮಾರೋಪ
ಗೋಕಾಕ: ಪ್ರತಿ ಕಾರ್ಯಕರ್ತರು ಪಕ್ಷ ನೀಡಿದ ಮಹತ್ತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷದ ಸರ್ವಾಂಗೀಣ ಏಳಿಗೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಪ್ರಶಿಕ್ಷಣ ಸಂಯೋಜಕ ಮಹೇಶ ಮೋಹಿತೆ ಹೇಳಿದರು.
ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಿಜೆಪಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲ ಮಟ್ಟದ ಪ್ರಶಿಕ್ಷಣ ಮಹಾಭಿಯಾನದ ಬೆಳಗಾವಿ ಗ್ರಾಮಾಂತರ ಜಿಲ್ಲೆ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಲು ಶಾಸಕ ರಮೇಶ ಜಾರಕಿಹೊಳಿ ಪ್ರೇರಣೆ, ಸಹಕಾರ ಮುಖ್ಯ. ಗೋಕಾಕ ಕ್ಷೇತ್ರದಲ್ಲಿ ಪ್ರಶಿಕ್ಷಣ ಮಹಾಭಿಯಾನ ಯಶಸ್ವಿಗೊಳಿಸುವಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ. ಪಕ್ಷದ ಆದರ್ಶ ರೂಢಿಸಿಕೊಳ್ಳುವ ಮೂಲಕ ಕಾರ್ಯಕರ್ತರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮುಖಂಡರಾದ ಭೀಮಗೌಡ ಪೋಲಿಸ್‌ಗೌಡರ, ಸುರೇಶ ಸನದಿ, ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ನೀತಿನ ಚೌಗಲೆ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಪ್ರಮೋದ ಜೋಶಿ, ಶಿವಾನಂದ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ ಇತರರಿದ್ದರು.
ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ವಡೆಯರ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net