ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕೇಂದ್ರ ಸಚಿವ ಗಜೇಂದ್ರಸಿಂಗ ಶೇಖಾವತ್ ಕೃತಿಗಳನ್ನು ಬಿಡುಗಡೆಗೊಳಿಸುವರು. ಆರ್‌ಎಸ್‌ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಡೆ ಸಮಾರೋಪ ಭಾಷಣ ಮಾಡುವರು. ಆರ್‌ಎಸ್‌ಎಸ್ ಕರ್ನಾಟಕ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಅರವಿಂದರಾವ್ ದೇಶಪಾಂಡೆ, ಸಂಸದ ಜಗದೀಶ ಶೆಟ್ಟರ, ಶಾಸಕ ಅಭಯ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಗುರುದೇವ ರಾನಡೆ ಮೊಮ್ಮಗ ದೀಪಕ ಅಪ್ಟೆ, ನವದೆಹಲಿಯ ದೀನದಿಯಾಳ ಉಪಾಧ್ಯಾಯ ಶಿಕ್ಷಣ ಸಂಸ್ಥೆಯ ಡೀನ್ ಅತುಲ ಜೈನ ಪಾಲ್ಗೊಳ್ಳುವರು ಎಂದು ವಿವರಿಸಿದರು.