ವಾಣಿಜ್ಯೋದ್ಯಮ ಸಂಘದ ಕಚೇರಿಗೆ ಭೇಟಿ

ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಕಚೇರಿಗೆ ಗುರುವಾರ ಇಂಡಿಗೋ ಸಂಸ್ಥೆ ಪ್ರತಿನಿಧಿಗಳು ಭೇಟಿ ನೀಡಿ ಚರ್ಚಿಸಿದರು.
ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಕಚೇರಿಗೆ ಗುರುವಾರ ಇಂಡಿಗೋ ಸಂಸ್ಥೆ ಪ್ರತಿನಿಧಿಗಳು ಭೇಟಿ ನೀಡಿ ಚರ್ಚಿಸಿದರು.
Published on
ಬೆಳಗಾವಿ : ಬೆಳಗಾವಿಯಿಂದ ವಿಮಾನ ಸಂಚಾರ ಕಡಿಮೆಯಾಗುವುದನ್ನು ಖಂಡಿಸಿ ವಾಣಿಜ್ಯೋದ್ಯಮ ಸಂಘ ಪ್ರತಿಭಟನೆಗೆ ಮುಂದಾಗಿದ್ದರಿಂದ ವಿವಿಧ ಖಾಸಗಿ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳು ಗುರುವಾರ ಸಂಘದ ಕಚೇರಿಗೆ ಭೇಟಿ ನೀಡಿ ಚರ್ಚೆಸಿದರು.
ಸಂಚಾರ ದಟ್ಟಣೆ ಇದ್ದರೂ ಬೆಳಗಾವಿಯಿಂದ ಸಂಚರಿಸುತ್ತಿದ್ದ ಹಲವಾರು ವಿಮಾನಗಳು ಏಕಾ ಏಕಿ ರದ್ದಾಗುತ್ತಿರುವುದು ಉದ್ಯಮಗಳ ಕಾರ್ಯಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದವು. ಜತೆಗೆ ಬೆಳಗಾವಿ ಅಭಿವೃದ್ಧಿಗೆ ಇದು ದೊಡ್ಡ ಹಿನ್ನಡೆಯನ್ನುಂಟು ಮಾಡುವ ಆತಂಕ ಎದುರಾಗಿತ್ತು. ಈ ಹಿನ್ನೆ ವಾಣಿಜ್ಯೋದ್ಯಮ ಸಂಘ ನಿರಂತರ ಸಭೆ ನಡೆಸಿ, ತಕ್ಷಣ ವಿವಿಧ ನಗರಗಳಿಗೆ ವಿಮಾನಯಾನ ಪುನಾರಂಭವಾಗದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಹೀಗಾಗಿ ಗುರುವಾರ ವಾಣಿಜ್ಯೋದ್ಯಮ ಸಂಘದ ಕಚೇರಿಗೆ ಆಗಮಿಸಿ ಚರ್ಚೆ ನಡೆಸಿದರು.
ಬೆಂಗಳೂರಿನ ಜತೆಗೆ ಮುಂಬೈ, ಚೆನ್ನೈ, ಅಹಮದಾಬಾದ್, ಜೋಧಪುರ ನಗರಗಳಿಗೆ ತುರ್ತಾಗಿ ವಿಮಾನ ಸಂಚಾರ ಅಗತ್ಯವಾಗಿದೆ. ವಾರಾಣಸಿ ಮತ್ತು ಕೊಚ್ಚಿ ನಗರಗಳಿಗೆ ಪ್ರಯಾಣಿಕರ ಸಂಖ್ಯೆ ದೊಡ್ಡದಿದೆ. ಬೆಳಗಾವಿ ರಫ್ತು ಉದ್ಯಮದಲ್ಲಿ ಬಹಳ ದೊಡ್ಡದಾಗಿ ಬೆಳೆದಿದೆ. ಜಿಎಸ್‌ಟಿ ಕೊಡುಗೆ ಕೂಡ ಸಾಕಷ್ಟಿದೆ. ವಿಮಾನ ಸಂಪರ್ಕ ಬಂದ್ ಆದಲ್ಲಿ ಜಿಲ್ಲೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಸಂಘದ ಪ್ರತಿನಿಧಿಗಳು ಹೇಳಿಕೊಂಡರು.
ಈ ಕುರಿತು ಸುದೀರ್ಘವಾಗಿ ಚರ್ಚಿಸಿದ ಪ್ರತಿನಿಧಿಗಳು ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಮುಂಬೈ ವಿಮಾನವನ್ನು ಇಷ್ಟರಲ್ಲೇ ಆರಂಭಿಸಲಾಗುವುದು. ಇತರೆ ನಗರಗಳಿಗೂ ಸೇವೆ ಆರಂಭಿಸುವ ಕುರಿತು ಮೇಲಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ, ಕಾರ್ಯದರ್ಶಿ ಸತೀಶ ಕುಲಕರ್ಣಿ, ಲಘು ಉದ್ಯೋಗ ಭಾರತಿಯ ರಾಷ್ಟ್ರೀಯ ಉಪಾಧ್ಯಕ್ಷ ಸಚಿನ ಸಬ್ನಿಸ, ವಾಣಿಜ್ಯೋದ್ಯಮ ಸಂಘದ ನಿರ್ದೇಶಕರಾದ ವಿಕ್ರಮ ಜೈನ, ಉದಯ ಜೋಶಿ, ಎಂ.ಕೆ.ಹೆಗಡೆ, ಆನಂದ ದೇಸಾಯಿ, ಸಂದೀಪ ಬಾಗೇವಾಡಿ, ಸಂಜಯ ಪೋತದಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್, ಇಂಡಿಗೋ ಸಂಸ್ಥೆಯ ಮನೋಜ ಪ್ರಭು, ವಿಮಾನ ನಿಲ್ದಾಣದ ಸೀನಿಯರ್ ಮ್ಯಾನೇಜರ್ ಮುಖುಲ್ ಶರ್ಮಾ, ಅಸಿಸ್ಟಂಟ್ ಮ್ಯಾನೇಜರ್ ಚೇತನ, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯ ಜಯಸಿಂಗ ರಜಪೂತ, ಬೆಳಗಾವಿ ಡೆವಲಪ್ ಮೆಂಟ್ ಕೋರ್ ಗ್ರುಪ್ ಸದಸ್ಯ ಸತೀಶಕುಮಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net