ಅವಧಿಯೊಳಗೆ ಗಣತಿ ಕಾರ್ಯ ಪೂರ್ಣಗೊಳಿಸಿ

ಗಣತಿ ಕಾರ್ಯ
ಗಣತಿ ಕಾರ್ಯ
Published on
ಬೆಳಗಾವಿ: ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಗಣತಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ ಎಂ. ತಿಳಿಸಿದರು.
ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಜರುಗಿದ ಗಣತಿ ಕಾರ್ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಗಣತಿದಾರರ ಕಾರ್ಯ ವೇಗ ಪಡೆಯಲು ಅಧಿಕಾರಿ ಹಾಗೂ ಸಿಬ್ಬಂದಿ ನಿರಂತರ ಸಂಪರ್ಕ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ವಿಳಂಬ ಮಾಡಬಾರದು ಎಂದರು.
ಕೆಲವೆಡೆ ನಿಧಾನವಾಗಿರುವ ಬ್ಲಾಕ್ ಸಮಸ್ಯೆ ಇತ್ಯರ್ಥಪಡಿಸಿ ಗಣತಿ ಕಾರ್ಯ ವೇಗ ಪಡೆಯಲು ಉಸ್ತುವಾರಿ ಅಧಿಕಾರಿಗಳು ನಿಗಾ ವಹಿಸಬೇಕು. ಪ್ರತಿ ದಿನದ ಗಣತಿ ಕಾರ್ಯ ಕುರಿತು ವರದಿ ನೀಡುವುದು ಕಡ್ಡಾಯ ಎಂದು ಸೂಚಿಸಿದರು.
ಪಾಲಿಕೆ ಉಪ ಆಯುಕ್ತ, ನಗರ ಗಣತಿ ಅಧಿಕಾರಿ ಡಾ.ಸಿದ್ದು ಹುಲ್ಲೋಳಿ ಮಾತನಾಡಿ, ಗಣತಿ ಕಾರ್ಯ ಆರಂಭಿಸದಿರುವ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು. ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಬಿ.ಟಿ., ಇತರ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net