ಕಾಂಗ್ರೆಸ್‌ನಿಂದ ರೈತ ವಿರೋಧ ನೀತಿ

ಮುರುೇಂದ್ರಗೌಡ ಪಾಟೀಲ
ಮುರುೇಂದ್ರಗೌಡ ಪಾಟೀಲ
Published on
ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ವೈಫಲ್ಯದಿಂದಾಗಿ ಕೃಷಿ ಬೆಳೆಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಬೆಂಬಲ ಬೆಲೆ ನೀಡದೆ ರೈತ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಗರ ಘಟಕದ ಮುಖಂಡ ಮುರುೇಂದ್ರಗೌಡ ಪಾಟೀಲ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿ, ಅನಾವೃಷ್ಟಿ, ಬೆಳೆಗಳ ದರ ಕುಸಿತದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ನ್ಯಾಯ ದೊರಕಿಸಿ ಕೊಡುವ ಬದಲು ದ್ರೋಹ ಬಗೆಯುತ್ತಿದೆ. ಉತ್ತರ ಕರ್ನಾಟಕ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳ ಬೇಕಿದ್ದ ಸರ್ಕಾರ ಸಮಸ್ಯೆ ಸೃಷ್ಟಿಸಿದೆ ಎಂದು ಟೀಕಿಸಿದರು.
ಎರಡು ವರ್ಷದ ಅವಧಿಯಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಮಾರುವಂತಹ ಸ್ಥಿತಿಯನ್ನು ಕಾಂಗ್ರೆಸ್ ಆಡಳಿತ ಸೃಷ್ಟಿಸಿದೆ. ಮೆಕ್ಕೆಜೋಳ, ಹೆಸರು ಸೇರಿ ವಿವಿಧ ಬೆಳೆಗಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆದಿಲ್ಲ. ಬೆಳೆಹಾನಿ ಪರಿಹಾರ ನೀಡಲು ಸರ್ಕಾರದ ಬಳಿ ಹಣ ಇಲ್ಲ. ರೈತ ವಿರೋಧಿ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ ಮುಂದಾಳತ್ವದಲ್ಲಿ ರೈತಪರ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಸ್ಪಂದಿಸುತ್ತಿಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ರೈತಪರ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net