ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಕಿಚ್ಚು

ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನಯ ನಾವಲಗಟ್ಟಿ, ಬಸವರಾಜ ಶೇಗಾವಿ, ರಾಜಾಸಲೀಂ ಕಾಶೀಮನವರ ಇತರರಿದ್ದರು.
ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನಯ ನಾವಲಗಟ್ಟಿ, ಬಸವರಾಜ ಶೇಗಾವಿ, ರಾಜಾಸಲೀಂ ಕಾಶೀಮನವರ ಇತರರಿದ್ದರು.
Published on
ಬೆಳಗಾವಿ:ರಾಜ್ಯದಲ್ಲಿ ಅಹಿಂದ ವರ್ಗದ ನಾಯಕರನ್ನು ಗುರಿಯಾಗಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆದಿದೆ ಎಂದು ಆರೋಪಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರನ್ನು ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಬಿಜೆಪಿ ಸರ್ಕಾರವು ರಾಜಕೀಯವಾಗಿ ಕಾಂಗ್ರೆಸ್ ನಾಯಕರನ್ನು ಎದುರಿಸಲು ಸಾಧ್ಯವಾಗದೆ ಐಟಿ, ಇಡಿ ದಾಳಿ ನಡೆಸಿ ಎದರಿಸುವ ಕೆಲಸ ಮಾಡುತ್ತಿದೆ. ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಬೆಳೆಯುತ್ತಿರುವ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗದ ನಾಯಕರನ್ನು ರಾಜಕೀಯವಾಗಿ ತುಳಿಯುವ ಉದ್ದೇಶವಿಟ್ಟುಕೊಂಡು ದಾಳಿ ನಡೆಸುತ್ತಿರುವುದು ಖಂಡನೀಯ.
ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಯುವ ಸಮುದಾಯದ ಧ್ವನಿ ಅಡಗಿಸಲು, ಆಡಳಿತ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರ ಮನೆಯ ಮೇಲೆ ದಾಳಿ ನಡೆಸುವ ಮೂಲಕ ಪ್ರಜಾಪ್ರಭತ್ವ ಕಗ್ಗೂಲೆ ಮಾಡುತ್ತಿದೆ. ಸಚಿವ ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕಾಂಗ್ರೆಸ್ ಯುವ ಮುಖಂಡ ರಾಹುಲ ಜಾರಕಿಹೊಳಿ ಹಾಗೂ ಆಪ್ತರ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದ್ದು, ಕೂಡಲೇ ಇಂತಹ ದಾಳಿ ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.
ಗ್ಯಾರಂಟಿ ಅನುಷ್ಠಾನ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಶೇಗಾವಿ,ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಾಜಾಸಲೀಂ ಕಾಶೀಮನವರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net