ನಗರದ ಗೃಹ ಕಚೇರಿಯಲ್ಲಿ ಗುರುವಾರ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಗಾಮೀಜಿ ಜಿಲ್ಲಾ, ನಗರ ಘಟಕದ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿ,ಕಾಂಗ್ರೆಸ್ ಪಕ್ಷದ ಸಂಘಟನೆ ಬಲಿಷ್ಠವಾಗಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುವುದು ಅತ್ಯಂತ ಮುಖ್ಯವಾಗಿದೆ. ನೂತನ ಅಧ್ಯಕ್ಷರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ.ಬಸವರಾಜ ಶೇಗಾವಿ ಹಾಗೂ ರಾಜಾಸಲೀಂ ಕಾಶೀಮನವರ ಅವರಿಗೆ ನೂತನ ಜವಾಬ್ದಾರಿಯಲ್ಲಿ ಯಶಸ್ಸು ದೊರೆಯಲಿ. ಪಕ್ಷದ ಸಂಘಟನೆಗೆ ಅವರ ಸೇವೆ ಇನ್ನಷ್ಟು ಪರಿಣಾಮಕಾರಿಯಾಗಲಿ ಎಂದು ಶುಭ ಹಾರೈಸಿದರು.