ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವ ನಿಟ್ಟಿನಲ್ಲಿ ಪ್ರಜೇಗಳ ಸೇವೆಗಾಗಿಯೇ ಹೊಸದಾಗಿ ಪ್ರಜಾಸೇವೆ ಇಲಾಖೆ ಆರಂಭಿಸಲಾಗುತ್ತಿದೆ. ಜನರಿಗಾಗಿಯೇ ಸರ್ಕಾರ ಆಡಳಿತ ನಡೆಸುತ್ತಿದ್ದು, ಪ್ರತಿಯೊಬ್ಬ ಸಚಿವರು ಶನಿವಾರ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ ಎಂದರು.