ಸವದತ್ತಿಯಲ್ಲಿ ಕಾಂಗ್ರೆಸ್ ಸೇರಿದ ಕಾರ್ಯಕರ್ತರು

ಸವದತ್ತಿ ನಗರದಲ್ಲಿ ಶಾಸಕ ವಿಶ್ವಾಸ ವೈದ್ಯ ಸಮ್ಮುಖದಲ್ಲಿ ಮಬನೂರ ಗ್ರಾಮದ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. ಕೀರಪ್ಪ ಹದ್ದನ್ನವರ, ಚಂದ್ರು ಜಂಬ್ರಿ, ಅಮೀರ್ ಗೋರಿನಾಯ್ಕ, ಸಿ.ಬಿ.ಬಾಳಿ, ಪಡೆಪ್ಪ ನರಿ, ಅಮೀರ್ ಗೋರಿನಾಯ್ಕ ಇತರಿದ್ದರು.

Published on
ಸವದತ್ತಿ:
ಉದಯಕುಮಾರ ಪಾಟೀಲ, ಆನಂದ ಪಾಟೀಲ, ಗೌಡಪ್ಪ ಪಾಟೀಲ, ಶ್ರೀಕಾಂತ ಪಾಟೀಲ, ಲಕ್ಷ್ಮಣ ಪಾಟೀಲ ಸೇರಿದಂತೆ ಒಟ್ಟು 24 ಜನ ಕ್ಷತ್ರ್ರೀಯ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಶಾಸಕ ವಿಶ್ವಾಸ ವೈದ್ಯ ಕಾಂಗ್ರೆಸ್‌ಗೆ ಬರಮಾಡಿಕೊಂಡರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆ ಹಾಗೂ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸಂತಸದ ಸಂಗತಿ. ಎಲ್ಲರೂ ಒಗ್ಗೂಡಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಶ್ರಮಿಸೋಣ ಎಂದರು.
ಜಿಪಂ ಮಾಜಿ ಸದಸ್ಯ ಕೀರಪ್ಪ ಹದ್ದನ್ನವರ, ವಕೀಲ ಎಸ್.ಆರ್.ಪಾಟೀಲ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ ಮಾತನಾಡಿ, ಬೂತ್ ಮಟ್ಟದಿಂದ ಪಕ್ಷ ಬಲಗೊಳಿಸುವ ಮೂಲಕ ಮುಂಬರುವ ದಿನಗಳಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿಯೋಣ ಎಂದು ತಿಳಿಸಿದರು.
ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net