ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಗೂಂಡಾವರ್ತನೆ

ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈರಣ್ಣಾ ಕಡಾಡಿ ಮಾತನಾಡಿದರು. ಹಣಮಂತ ಕೊಂಗಾಲಿ, ಗೀತಾ ಸುತಾರ ಇತರರಿದ್ದರು.
ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈರಣ್ಣಾ ಕಡಾಡಿ ಮಾತನಾಡಿದರು. ಹಣಮಂತ ಕೊಂಗಾಲಿ, ಗೀತಾ ಸುತಾರ ಇತರರಿದ್ದರು.
Published on
ಬೆಳಗಾವಿ:ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ವಿರುದ್ಧ ಗೂಂಡಾ ವರ್ತನೆ ಪ್ರದರ್ಶಿಸುವ ಮೂಲಕ ಪ್ರಜಾಪ್ರಭುತ್ವ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶ್ಚಿಮ ಬಂಗಾಳದ ಸರ್ಕಾರದ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಂವಿಧಾನಿಕ ಸಂಸ್ಥೆಗಳ ಮೇಲೆ ತೋಳಬಲ ಪ್ರಯೋಗ ಮೂಲಕ ಅಧಿಕಾರ ಪಡೆದುಕೊಳ್ಳಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ನಿಯಮದಂತೆ ಮೊದಲು ಮತ್ತು ಕೊನೆಯ ಪ್ಯಾರಾ ಓದಿದ್ದಾರೆ. ಸರ್ಕಾರ ಬರೆದುಕೊಟ್ಟಿರುವುದನ್ನೆಲ್ಲಾ ಓದಬೇಕು ಎಂಬ ನಿಯಮ ಇಲ್ಲ. ಆದರೂ, ಕಾಂಗ್ರೆಸ್ ಸರ್ಕಾರ ಗೂಂಡಾವರ್ತನೆಯು ಒಕ್ಕೂಟದ ವ್ಯವಸ್ಥೆಗೆ ಕಪ್ಪು ಚುಕ್ಕೆ ತರುವ ಕೆಲಸ ಮಾಡಿದೆ ಎಂದು ಟೀಕಿಸಿದರು.
ದೇಶದ ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ದಶಕಗಳ ಕಾಲ ಜಾರಿಯಲ್ಲಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಯನ್ನು ಬದಲಿಸಿ, ಕೇಂದ್ರ ಸರ್ಕಾರವು ’ವಿಕಸಿತ ಭಾರತ - ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಅಜೀವಿಕಾ ಮಿಷನ್’ ಎಂಬ ಹೊಸ ಯೋಜನೆಯನ್ನು ಜಾರಿಗೆಗೆ ತಂದಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಈ ಬದಲಾವಣೆ ತರಲಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದೆ ಎಂದರು.
ಕೇಂದ್ರದ ಎನ್‌ಡಿ ಎ ಸರ್ಕಾರವು ಕಳೆದ 5 ವರ್ಷಗಳಲ್ಲಿ ದಿನಗೂಲಿ ಶೇ. 27 ರಷ್ಟು ಹೆಚ್ಚಿಸಲಾಗಿದ್ದು, ಸದ್ಯ 370 ರೂ.ನಿಗದಿಪಡಿಸಲಾಗಿದೆ.ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬಯೋಮೆಟ್ರಿಝ್ಛ್ಛಿ ಹಾಜರಾತಿ, ಜಿಯೋ ಟ್ಯಾಗಿಂಜ್ಛ್ಛ ಮತ್ತು ಎಐ ಆಧಾರಿತ ನಿಗಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಹಳೆಯ ಯೋಜನೆಯಲ್ಲಿ ಕಂಡುಬಂದಿದ್ದ ಲೋಪದೋಷಗಳನ್ನು ಸರಿಪಡಿಸಲು ಈ ಹೊಸ ಕಾಯ್ದೆ ಒತ್ತು ನೀಡಿದೆ.
ಕರ್ನಾಟಕದಲ್ಲಿ 2019 ರಿಂದ 2025 ರ ಅವಧಿಯಲ್ಲಿ ಸುಮಾರು 669.92 ಕೋಟಿ ರೂ. ಮೊತ್ತದ ಅಕ್ರಮಗಳು ನಡೆದಿರುವುದು ಪತ್ತೆಯಾಗಿದೆ. ಈ ಪೈಕಿ ಕೇವಲ 100 ಕೋಟಿ ರೂ. ಮಾತ್ರ ವಸೂಲಿಯಾಗಿದ್ದು, ಅಕ್ರಮದಲ್ಲಿ ಭಾಗಿಯಾದ 306 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕಲಬುರಗಿ ಮತ್ತು ಯಾದಗಿರಿಯಂತಹ ಜಿಲ್ಲೆಗಳಲ್ಲಿ ಸತ್ತವರ ಹೆಸರಿನಲ್ಲಿ ಹಣ ಲೂಟಿ ಮಾಡಿದ ಹಾಗೂ ಯಂತ್ರಗಳ ಮೂಲಕ ಕೆಲಸ ಮಾಡಿಸಿ ಉದ್ಯೋಗಿಗಳ ಹೆಸರಿನಲ್ಲಿ ಬಿಲ್ ಪಡೆದ ಗಂಭೀರ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಪಾಲಿಕೆ ಸದಸ್ಯ ಹಣಮಂತ ಕೊಂಗಾಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net