ಮಹಾತ್ಮರ ಸ್ಮರಣೆಗೆ ಪ್ರತಿಮೆ ನಿರ್ಮಾಣ

ಸುಳೇಭಾವಿ ಗ್ರಾಮದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ನಿರ್ಮಾಣಕ್ಕೆ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು. ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಸುಳೇಭಾವಿ ಗ್ರಾಮದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ನಿರ್ಮಾಣಕ್ಕೆ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು. ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
Published on
ಬೆಳಗಾವಿ: ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ವೀರ ಪರಂಪರೆಯನ್ನು ಪಸರಿಸುವ ಉದ್ದೇಶದಿಂದ ವಿವಿಧ ಸಮುದಾಯದ ಮಹನೀಯರ ಪ್ರತಿಮೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಸುಳೇಭಾವಿ ಗ್ರಾಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ 20 ಲಕ್ಷ ರೂ. ವೆಚ್ಚದಲ್ಲಿ ವೀರ ಮದಕರಿ ನಾಯಕ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿ, ವೀರ ಮದಕರಿ ನಾಯಕ ಶೌರ್ಯ, ಸ್ವಾಭಿಮಾನ ಮತ್ತು ದೇಶಭಕ್ತಿಯಿಂದ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವಗಳ ಸ್ಮರಣೆ ಶಾಶ್ವತವಾಗಿರಬೇಕು ಎಂಬ ಆಶಯದಿಂದ ಪ್ರತಿಮೆ ನಿರ್ಮಿಸಲಾಗುತ್ತಿದೆ ಎಂದರು. ಗ್ರಾಮದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ಗ್ರಾಮಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಲಕ್ಷ್ಮೀತಾಯಿ ಫೌಂಡೇಷನ್ ಪದಾಧಿಕಾರಿಗಳು ಇದ್ದರು.
ಮಂದಿರ ನಿರ್ಮಾಣ ಚರ್ಚೆ: ಬಸ್ತವಾಡ ಗ್ರಾಮದಲ್ಲಿ 1.05 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಮೇಶ್ವರ ಮಂದಿರ ಕಾಮಗಾರಿ ಕುರಿತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಗ್ರಾಮದ ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷ ಕಾಳಜಿಯಿಂದ ಈಗಾಗಲೇ 40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದರು. ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಲಕ್ಷ್ಮೀತಾಯಿ ಫೌಂಡೇಷನ್‌ನಿಂದ 51 ಸಾವಿರ ರೂ. ಮುಂಗಡ ಮೊತ್ತವನ್ನು ದೇವಸ್ಥಾನ ಸಮಿತಿಗೆ ಹಸ್ತಾಂತರಿಸಲಾಯಿತು. ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ದಿಗಂಬರ ಜೈನ ಸಮುದಾಯದ ವಿಶ್ವಸ್ಥ ಮಂಡಳಿ ಸಮುದಾಯ ಭವನಕ್ಕೆ 40 ಲಕ್ಷ ರೂ., ನವಗ್ರಹ ಜಿನ ಮಂದಿರ ಯುವಕ ಮಂಡಳದ ಸಮುದಾಯ ಭವನಕ್ಕೆ 50 ಲಕ್ಷ ರೂ. ಅನುದಾನ ಮಂಜೂರಾಗಿರುವ ಹಿನ್ನೆಲೆಯಲ್ಲಿ ಚರ್ಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net