ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಮಾಲೋಚನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸಮಾಲೋಚನಾ ಸಭೆ ನಡೆಸಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸಮಾಲೋಚನಾ ಸಭೆ ನಡೆಸಿದರು.
Published on
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸಮಾಲೋಚನಾ ಸಭೆ ನಡೆಸಿದರು.
ಗೃಹ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕರ್ತೆಯರ ಕುಂದುಕೊರತೆಗಳನ್ನು ಆಲಿಸಿದ ಸಚಿವರು, ಸ್ಥಳೀಯಮಟ್ಟದ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಇಲಾಖೆಯ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳ ನಿವಾರಣೆ ಜೊತೆಗೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗಿದೆ. ಇಲಾಖೆಯ ಆಡಳಿತದಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಸರಕಾರ ಅತ್ಯಂತ ಗೌರವದಿಂದ ಕಾಣುತ್ತಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಮಿತ್ರಾ, ಯುನಿಯನ್ ಲೀಡರ್ ಮಂದಾ ನಿಯೋಗಿ ಉಪಸ್ಥಿತರಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net