ಸಂವಿಧಾನ ಶಿಲ್ಪಿ ಕೊಡುಗೆ ಅಪಾರ

ಯಳ್ಳೂರ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ  ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ನವೀನ್ ಎನ್., ಡಾ.ಸಂಜಯ ಕಂಬಾರ ಇತರರಿದ್ದರು.
ಯಳ್ಳೂರ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ನವೀನ್ ಎನ್., ಡಾ.ಸಂಜಯ ಕಂಬಾರ ಇತರರಿದ್ದರು.
Published on
ಬೆಳಗಾವಿ: ಸಮಾಜದ ಎಲ್ಲ ವರ್ಗದ ಜನರಿಗೆ ಶಿಕ್ಷಣ ಮತ್ತು ಸಮಾನತೆ ದೊರಕಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರವಾವಿದೆ ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಎನ್. ಹೇಳಿದರು. ತಾಲೂಕಿನ ಯಳ್ಳೂರ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ರಚಿಸಿರುವ ಸಂವಿಧಾನವು ಮಹಿಳೆ, ಕಾರ್ಮಿಕರು ಸೇರಿ ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗಿದೆ. ಜತೆಗೆ ಅವರ ತತ್ತ್ವಗಳು ಆರೋಗ್ಯ ಸೇವಾ ಕ್ಷೇತ್ರದಲ್ಲೂ ಪ್ರಾಮುಖ್ಯ ಹೊಂದಿವೆ. ಈ ನಿಟ್ಟಿನಲ್ಲಿ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಹೊಣೆಗಾರಿಕೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ.ಸಂಜಯ ಕಂಬಾರ, ಯುಎಸ್‌ಎಂ-ಕೆಎಲ್‌ಇ ನಿರ್ದೇಶಕ ಡಾ.ಎಚ್.ಬಿ.ರಾಜಶೇಖರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net