ಅಥಣಿ: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮನೆ ಛಿದ್ರಗೊಂಡು ದಂಪತಿ ಗಂಭೀರ ಗಾಯಗೊಂಡಿರುವ ಟನೆ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡಿರುವ ಧನಪಾಲ ಕಾಂಬಳೆ, ಅನಸೂಯಾ ಕಾಂಬಳೆ ಅವರನ್ನು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ರಭಸಕ್ಕೆ ಗೋಡೆಗಳು ಕುಸಿದು ಮನೆಯ ಸಂಪೂರ್ಣ ಹಾನಿಗೊಳಗಾಗಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಠಾಣೆ ಪೊಲೀಸರು ಪರಿಶೀಲಿಸಿದ್ದಾರೆ.