ಅಶ್ಲೀಲ ಗೀತೆಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ

ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಹಾಡುಗಳ ಪ್ರಸಾರ ನಿಲ್ಲಿಸುವಂತೆ ಆಗ್ರಹಿಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಶ್ರೀನಿವಾಸಗೌಡ ಎನ್ನುವವರು, ಕೆಲ ಅಶ್ಲೀಲ ಹಾಡುಗಳ ಪೋಸ್ಟರ್ ಪ್ರದರ್ಶಿಸಿ ಬ್ಯಾನ್ ಮಾಡಲು ಆಗ್ರಹಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಹಾಡುಗಳ ಪ್ರಸಾರ ನಿಲ್ಲಿಸುವಂತೆ ಆಗ್ರಹಿಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಶ್ರೀನಿವಾಸಗೌಡ ಎನ್ನುವವರು, ಕೆಲ ಅಶ್ಲೀಲ ಹಾಡುಗಳ ಪೋಸ್ಟರ್ ಪ್ರದರ್ಶಿಸಿ ಬ್ಯಾನ್ ಮಾಡಲು ಆಗ್ರಹಿಸಿದರು.
Published on
ಬೆಳಗಾವಿ: ಸಾರ್ವಜನಿಕ ಸ್ಥಳ, ಟ್ರಾಕ್ಟರ್ ಮತ್ತು ಬಸ್‌ಗಳಲ್ಲಿ ಹೆಚ್ಚಾಗಿರುವ ಮೊಬೈಲ್ ಮತ್ತಿತರೆ ಸೌಂಡ್ ಸಿಸ್ಟಮ್‌ಗಳ ಅಶ್ಲೀಲ ಹಾಡುಗಳ ಹಾವಳಿಗೆ ಕಡಿವಾಣ ಹಾಕುವ ಕುರಿತು ಸೋಮವಾರ ವಿಜಯವಾಣಿಯಲ್ಲಿ ವರದಿ ಪ್ರಕಟಿದ ಬೆನ್ನಲ್ಲೆ ಹೋರಾಟಗಳು ಆರಂಭಗೊಂಡಿವೆ.
ಟ್ರಾಕ್ಟರ್ ಹಾಗೂ ಇತರೆ ವಾಹನಗಳಲ್ಲಿ ಅಕ್ರಮವಾಗಿ ಧ್ವನಿವರ್ಧಕ ಅಳವಡಿಸಿ ಅಶ್ಲೀಲ ಅಸಭ್ಯ ಹಾಡುಗಳನ್ನು ಹಾಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವ ವಾಹನಗಳ ಶಬ್ದಮಾಲಿನ್ಯದ ಜತೆಗೆ ವಿದ್ಯಾರ್ಥಿಗಳ, ಚಿಕ್ಕ ಮಕ್ಕಳ, ಮಹಿಳೆಯರು, ವೃದ್ಧರು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದಾರೆ. ಇದು ಸಮಾಜದ ಸ್ವಾಸ್ಥೃವನ್ನೂ ಹಾಳು ಮಾಡುತ್ತಿದ್ದು, ಇಂಥವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಶ್ರೀನಿವಾಸಗೌಡ ಪಾಟೀಲ ನೇತೃತ್ವದಲ್ಲಿ ಸೋಮವಾರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ಕಾನೂನುಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಜಾನಪದ ಗೀತೆಗಳೆಂದು ಬಿಂಬಿಸಿ ಯುವಜನತೆಯನ್ನು ದಾರಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಟಗಳು ಆರಂಭಗೊಂಡಿದ್ದು, ಈ ಸಂಬಂಧ ಸೋಮವಾರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸ್ ಇಲಾಖೆಯ ಉತ್ತರ ವಲಯ ವ್ಯಾಪ್ತಿಯಲ್ಲಿ ಬರುವ ಬಾಗಲಕೋಟೆ, ವಿಜಯಪುರ, ಬೆಳಗಾವಿ ಇತರೆ ಜಿಲ್ಲೆಗಳಲ್ಲಿ ಸಾಮಾಜಿಕ ಸ್ವಾಸ್ಥ್ಯ, ಅಶಾಂತಿ ಸೃಷ್ಟಿಸುವ ಕಾನೂನುಬಾಹಿರ ಅಶ್ಲೀಲ ಅಸಭ್ಯ ಹಾಡುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದು, ಜಾತ್ರೆ, ಉತ್ಸವ, ಧಾರ್ಮಿಕ ಸಭೆಗಳಲ್ಲಿ ರಸಮಂಜರಿ ನೆಪದಲ್ಲಿ ಪ್ರಸಾರ ಮಾಡುವುದು ಹೆಚ್ಚಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಗೌರವಕ್ಕೆ ಚ್ಯುತಿ ತರುವ ಜತೆಗೆ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹೀಗಾಗಿ ಇವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net