ಸುಮಾರು 10 ವರ್ಷಗಳಿಂದ ಇಲ್ಲಿ ನೆಲೆಸಿದ್ದೆವೆ. ಮಹಾಲಕ್ಷ್ಮೀನಗರಕ್ಕೆ ಯಾವುದೇ ಸೌಲಭ್ಯ ದೊರೆತಿಲ್ಲ. ಇಲ್ಲಿನ ರಸ್ತೆಗಳು ತುಂಬಾ ಹದಗೆಟ್ಟುಹೋಗಿದ್ದು, ಚರಂಡಿ ಸಹ ಹಾಳಾಗಿವೆ. ಇದರಿಂದ ಮಳೆ ಬಂದಾಗ ಚರಂಡಿ ನೀರು ರಸ್ತೆಯ ಮೇಲೆಲ್ಲೆ ಹರಿದು ಜನ ಓಡಾಡುವದು ದುಸ್ತರವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೂಡಲೇ ಚರಂಡಿ ಹಾಗೂ ರಸ್ತೆ ದುರಸ್ತಿ ಮಾಡಿಸಬೇಕು. ಬೀದಿ ದೀಪಗಳ ಕೊರತೆ, ನದಿ ನೀರು ಈ ಭಾಗಕ್ಕೆ ಸರಿಯಾಗಿ ತಲುಪುತ್ತಿಲ್ಲ ಇದರಿಂದ ನಗರ ಜನರಿಗೆ ನೀರಿನ ತೊಂದರೆ ಉಂಟಾಗುತ್ತಿದ್ದು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ನಿರಂತರ ಶುದ್ಧ ಕುಡಿಯವ ನೀರು ಪೂರೈಕೆ ಮಾಡಬೇಕು. ಇಲ್ಲಿರುವ ಸ್ಮಶಾನಭೂಮಿಯನ್ನು ಬೇರೆ ಕಡೆ ಸ್ಥಳಾಂತರ ಮಾಡಬೇಕು ಎಂದು ಕೇಳಿಕೊಂಡರು.